Nawab Malik, ED


 
A1
ಸುದ್ದಿಗಳು

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್‌ ಮಲಿಕ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮುಂಬೈ ನ್ಯಾಯಾಲಯ [ಚುಟುಕು]

Bar & Bench

ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಅವರನ್ನು ಮಾರ್ಚ್ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈನ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಈ ಕುರಿತು ಸೋಮವಾರ ಆದೇಶ ಹೊರಡಿಸಿದ್ದಾರೆ. ಭೂಗತ ಪಾತಿಕ ದಾವೂದ್‌ ಇಬ್ರಾಹಿಂನಿಂದ ಮಾರುಕಟ್ಟೆ ಮೌಲ್ಯಕ್ಕಿಂತ ಕಡಿಮೆ ದರದಲ್ಲಿ ಆಸ್ತಿ ಖರೀದಿಸಿದ ಆರೋಪದ ಮೇಲೆ ಇ ಡಿ ಮಲಿಕ್ ಅವರನ್ನು ಬಂಧಿಸಿತ್ತು.

ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.