ಅರ್ಜಿಯೊಂದನ್ನು ಅಂಗೀಕರಿಸಿದರೂ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿ ಪ್ರಕರಣವನ್ನು ಫಲಪ್ರದಗೊಳಿಸದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ಬದಿಗೆ ಸರಿಸಿದೆ. ಪ್ರಕರಣವನ್ನು ಒಪ್ಪಿಕೊಂಡು ಮಧ್ಯಂತರ ಪರಿಹಾರ ನೀಡದೆ ಯಾವ ಉದ್ದೇಶ ಈಡೇರಿಸದಂತಾಗಿದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದರೇಶ್ ಅವರಿದ್ದ ಪೀಠ ಪ್ರಶ್ನಿಸಿದೆ. ಈ ಹಿನ್ನೆಲೆಯಲ್ಲಿ ಯಾವುದಾದರೂ ಒಂದು ರೀತಿಯಲ್ಲಿ ಪ್ರಕರಣವನ್ನು ನಿರ್ಧರಿಸುವಂತೆ ಸೂಚಿಸಿದ ಪೀಠ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.