Nawab malik, Sameer Wankhede and bombay hc

 
ಸುದ್ದಿಗಳು

ಜೈಲಿನಲ್ಲಿರುವ ನವಾಬ್ ಮಲಿಕ್‌ರನ್ನು ಶಿಕ್ಷಿಸುವುದರಲ್ಲಿ ಅರ್ಥವಿಲ್ಲ: ಬಾಂಬೆ ಹೈಕೋರ್ಟ್ [ಚುಟುಕು]

Bar & Bench

ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ ಮುಂದೂಡಿದೆ. ಮಲಿಕ್ ಈಗಾಗಲೇ ಜೈಲಿನಲ್ಲಿರುವ ಕಾರಣ ಈಗ ಶಿಕ್ಷೆ ವಿಧಿಸುವುದು ವ್ಯರ್ಥ ಎಂದು ನ್ಯಾಯಮೂರ್ತಿಗಳಾದ ಎಸ್‌ ಜೆ ಕಥಾವಲ್ಲಾ ಮತ್ತು ಮಿಲಿಂದ್ ಜಾಧವ್ ಅವರಿದ್ದ ಪೀಠ ಹೇಳಿದೆ. ಎನ್‌ಸಿಬಿ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರ ತಂದೆ ಧ್ಯಾನ್‌ದೇವ್ ವಾಂಖೆಡೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.