Protest March  Image for representative purpose
ಸುದ್ದಿಗಳು

ಶಾಂತಿಯುತ ಪ್ರತಿಭಟನೆ ಮೂಲಭೂತ ಹಕ್ಕು: ಐವರು ಮಹಿಳೆಯರನ್ನು ಖುಲಾಸೆಗೊಳಿಸಿದ ಮುಂಬೈ ನ್ಯಾಯಾಲಯ [ಚುಟುಕು]

Bar & Bench

ತಮ್ಮ ಪ್ರದೇಶದಲ್ಲಿ ನೀರು ಪೂರೈಕೆ ವ್ಯತ್ಯಯದ ವಿರುದ್ಧ ಪ್ರತಿಭಟನೆ ನಡೆಸಲು ಅಕ್ರಮವಾಗಿ ಜನರನ್ನು ಒಗ್ಗೂಡಿಸಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಐವರು ಮಹಿಳೆಯರನ್ನು ಮುಂಬೈನ ಕುರ್ಲಾದಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಖುಲಾಸೆಗೊಳಿಸಿದೆ.

"ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮೂಲಭೂತ ಹಕ್ಕು" ಎಂದು ಅಭಿಪ್ರಾಯಪಟ್ಟ ನ್ಯಾಯಧೀಶ ಆರ್‌ ಎಸ್ ಪಜನಕರ, ಇಬ್ಬರು ಹಿರಿಯ ನಾಗರಿಕರು ಸೇರಿದಂತೆ ಐವರು ಮಹಿಳೆಯರನ್ನು ಖುಲಾಸೆಗೊಳಿಸಿದರು. ಪ್ರತಿಭಟನೆಯಲ್ಲಿ ಐವತ್ತು ಮಂದಿ ಭಾಗಿಯಾಗಿದ್ದರೂ ಆ ದಿನ ಕೇವಲ ಒಬ್ಬ ಮಹಿಳೆಯನ್ನು ಬಂಧಿಸಿರುವುದು, ಸ್ವತಂತ್ರ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸದೇ ಇರುವದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.


ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.