Chitradurga District Court Complex 
ಸುದ್ದಿಗಳು

ಪೋಕ್ಸೊ ಪ್ರಕರಣ: ಪರಮಶಿವಯ್ಯ, ಗಂಗಾಧರ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಇದಕ್ಕೂ ಮುನ್ನ, ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ ವಿವಿಧ ದಾಖಲೆಗಳನ್ನು ಕೋರಿ ಪರಮಶಿವಯ್ಯ ಮತ್ತು ಎನ್‌ ಗಂಗಾಧರ ಅವರ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿತ್ತು.

Bar & Bench

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಬಂಧಿತರಾಗಿರುವ ಪೋಕ್ಸೊ ಪ್ರಕರಣದಲ್ಲಿ ನಾಲ್ಕು ಮತ್ತು ಐದನೇ ಆರೋಪಿಗಳಾಗಿರುವ ಪರಮಶಿವಯ್ಯ ಮತ್ತು ಎನ್‌ ಗಂಗಾಧರ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಆದೇಶವನ್ನು ವಿಶೇಷ ನ್ಯಾಯಾಲಯವು ಅಕ್ಟೋಬರ್‌ 7ಕ್ಕೆ ಕಾಯ್ದಿರಿಸಿದೆ.

ವಿಶೇಷ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ಆದೇಶ ಕಾಯ್ದಿರಿಸಿದ್ದಾರೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಸಿ ಎಚ್‌ ಹನುಮಂತರಾಯ ಮತ್ತು ವಕೀಲ ಕೆ ಬಿ ಕೆ ಸ್ವಾಮಿ ಅವರು ವಾದ ಮಂಡಿಸಿದ್ದರು.

ಇದಕ್ಕೂ ಮುನ್ನ, ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ ವಿವಿಧ ದಾಖಲೆಗಳನ್ನು ಕೋರಿ ಪರಮಶಿವಯ್ಯ ಮತ್ತು ಎನ್‌ ಗಂಗಾಧರ ಅವರ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿತ್ತು.

ಈಗಾಗಲೇ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಬಸವಾದಿತ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದ್ದು, ಮೊದಲ ಆರೋಪಿ ಶಿವಮೂರ್ತಿ ಮುರುಘಾ ಶರಣರು ಮತ್ತು ಎರಡನೇ ಆರೋಪಿ ಎಸ್‌ ರಶ್ಮಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.