ದೆಹಲಿ ಪೊಲೀಸರಿಗೆ ತಿಳಿಸದೆ ಇತರ ರಾಜ್ಯಗಳ ಪೊಲೀಸರು ದೆಹಲಿ ನಿವಾಸಿಗಳನ್ನು ಕರೆದೊಯ್ಯಲು ಅನುಮತಿ ನೀಡುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಹೇಳಿದೆ. ದೆಹಲಿಯ ದ್ವಾರಕಾದಿಂದ ತಮ್ಮ ಮಗನನ್ನು ತೆಲಂಗಾಣ ಪೊಲೀಸರು ಕರೆದೊಯ್ದಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ಅನೂಪ್ ಜೈರಾಮ್ ಭಂಭಾನಿ ಅವರಿದ್ದ ಪೀಠ ಇತ್ತೀಚೆಗೆ ಅಂತಹ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.