Jharkhand HC with Rahul Gandhi
Jharkhand HC with Rahul Gandhi Facebook
ಸುದ್ದಿಗಳು

ಮೋದಿ ಉಪನಾಮ ಪ್ರಕರಣ: ರಾಹುಲ್‌ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ಜಾರ್ಖಂಡ್‌ ಹೈಕೋರ್ಟ್‌

Bar & Bench

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿಂದತೆ ದಾಖಲಾಗಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ವಿನಾಯಿತಿ ನೀಡಿದೆ [ರಾಹುಲ್‌ ಗಾಂಧಿ ವರ್ಸಸ್‌ ಜಾರ್ಖಂಡ್‌ ರಾಜ್ಯ ಮತ್ತು ಇತರರು].

ಪ್ರದೀಪ್‌ ಮೋದಿ ಎಂಬವರು ದಾಖಲಿಸಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರಿಗೆ ವಿಚಾರಣೆಯಲ್ಲಿ ಭಾಗಿಯಾಗುವುದರಿಂದ ವಿನಾಯಿತಿ ನೀಡದ ರಾಂಚಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ದ್ವಿವೇದಿ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

“ಅರ್ಜಿದಾರರು ಹಾಲಿ ಸದಸ್ಯರಾಗಿದ್ದು, ಸಂಸತ್‌ ಕಲಾಪದಲ್ಲಿ ಭಾಗಿಯಾಗುವುದು ಸೇರಿದಂತೆ ಇತರೆ ಕೆಲಸಗಳಲ್ಲಿ ಅವರು ಮಗ್ನರಾಗಿರುತ್ತಾರೆ. ಷರತ್ತುಗಳಿಗೆ ಸಂಬಂಧಿಸಿದಂತೆ ಸಂಬಂಧಿತ ನ್ಯಾಯಾಲಯದಲ್ಲಿ ಹೊಸದಾಗಿ ಅಫಿಡವಿಟ್‌ ಸಲ್ಲಿಸುವ ಮೂಲಕ ರಾಹುಲ್‌ ಗಾಂಧಿ ಅವರು ಅನುಪಾಲನೆ ಮಾಡಿದ್ದಾರೆ. ಈ ಹೇಳಿಕೆಯ ಹಿನ್ನೆಲೆಯಲ್ಲಿ ವಿಚಾರಣಾಧೀನ ನ್ಯಾಯಾಲಯಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ. ಸಿಆರ್‌ಪಿಸಿ ಸೆಕ್ಷನ್‌ 205ರ ಅಡಿ ತಮ್ಮ ಅರ್ಜಿಗೆ ಅನುಮತಿಸುವುದಕ್ಕೆ ಸಮರ್ಥನೆ ಇದೆ” ಎಂದು ಪೀಠ ಹೇಳಿದೆ.

ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರು ಖುದ್ದು ನ್ಯಾಯಾಲಯದಲ್ಲಿ ಹಾಜರಾಗಿದ್ದರು ಎಂಬುದನ್ನು ಉಲ್ಲೇಖಿಸಿ ವಿಚಾರಣಾಧೀನ ನ್ಯಾಯಾಲಯವು ತಮ್ಮ ಅರ್ಜಿ ವಜಾ ಮಾಡಿದೆ ಎಂದು ರಾಹುಲ್‌ ವಾದಿಸಿದ್ದರು.