City civil court, Bengaluru 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿನಯ್‌, ಕೇಶವಮೂರ್ತಿ ಜಾಮೀನು ಅರ್ಜಿ ತಿರಸ್ಕರಿಸಿದ ಬೆಂಗಳೂರಿನ ಸತ್ರ ನ್ಯಾಯಾಲಯ

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿಗಳಾದ ವಿ ವಿನಯ್‌ ಮತ್ತು ಕೇಶವಮೂರ್ತಿ ಅವರ ಜಾಮೀನು ಅರ್ಜಿಗಳನ್ನು ಬೆಂಗಳೂರಿನ ಸತ್ರ ನ್ಯಾಯಾಲಯ ಸೋಮವಾರ ವಜಾ ಮಾಡಿದೆ.

ಪ್ರಕರಣದಲ್ಲಿ 10 ಮತ್ತು 16ನೇ ಆರೋಪಿಗಳಾದ ವಿನಯ್‌ ಹಾಗೂ ಕೇಶವಮೂರ್ತಿ ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ಇಂದು ಪ್ರಕಟಿಸಿದರು.

“ಕೇಶವಮೂರ್ತಿ ವಿರುದ್ದ ಇತರ ಆರೋಪಿಗಳು ಹೇಳಿಕೆ ನೀಡಿದ್ದು, ಸಾಕ್ಷಿ ನಾಶದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಆರೋಪಿ ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ” ಎಂದು ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ವಾದಿಸಿದ್ದರು.

“ವಿನಯ್‌ ಪಾತ್ರದ ಬಗ್ಗೆ ಪ್ರತ್ಯಕ್ಷವಾಗಿ ಘಟನೆ ನೋಡಿರುವ ಒಬ್ಬರು ಸಾಕ್ಷಿ ನುಡಿದ್ದಾರೆ. ಈ ಸಂಬಂಧ ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇನ್ನೂ ತನಿಖೆ ನಡೆಯುತ್ತಿರುವುದರಿಂದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು” ಎಂದು ವಾದಿಸಿದ್ದರು.

ಈಚೆಗೆ ಒಂದನೇ ಆರೋಪಿ ಪವಿತ್ರಾಗೌಡ ಮತ್ತು ಅನುಕುಮಾರ್‌ ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು.