ಜಾರಿ ನಿರ್ದೇಶನಾಲಯ (ಇ ಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಿಡುಗಡೆ ವಿರುದ್ಧ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಎಸ್ ಮೇಘಲಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇ ಡಿ ತನಿಖೆ ನಡೆಸುತ್ತಿರುವ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸೆಂಥಿಲ್ ಅವರನ್ನು ಕಳೆದ ತಿಂಗಳು ವಿಚಾರಣೆಗೊಳಪಡಿಸಿ ನಂತರ ಬಂಧಿಸಲಾಗಿತ್ತು.
ಮೇಘಲಾ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಜುಲೈ 14ರಂದು ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಸೆಂಥಿಲ್ ಬಿಡುಗಡೆ ವಿರುದ್ಧ ತೀರ್ಪು ನೀಡಿತ್ತು.
ಈ ಹಿಂದೆ ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳು ಪ್ರಕರಣದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಗೆ ನೇಮಕಗೊಂಡಿದ್ದ ನ್ಯಾಯಮೂರ್ತಿ ಸಿ ವಿ ಕಾರ್ತಿಕೇಯನ್ ಅವರು ಈ ತೀರ್ಪು ಪ್ರಕಟಿಸಿದ್ದರು.