Mamata Banerjee and Mumbai Sessions Court
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಂಬೈ ಕಾರ್ಯದರ್ಶಿ ವಿವೇಕಾನಂದ ಗುಪ್ತಾ ಅವರು ದಾಖಲಿಸಿದ್ದ ಪ್ರಕರಣದಲ್ಲಿ ನೀಡಲಾಗಿದ್ದ ಸಮನ್ಸ್‌ಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತಡೆ ನೀಡಿದೆ. ಮಮತಾ ಅವರು ರಾಷ್ಟ್ರೀಯ ಗೌರವ ಅಪಮಾನ ನಿಯಂತ್ರಣ ಕಾಯಿದೆಯಡಿ ಶಿಕ್ಷಾರ್ಹ ಅಪರಾಧ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಈ ಹಿಂದೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ವಕೀಲರೂ ಆಗಿರುವ ಗುಪ್ತಾ ಅವರ ಮತ್ತು ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 25ಕ್ಕೆ ನಿಗದಿಯಾಗಿದೆ.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.