ಸುದ್ದಿಗಳು

ಹೊಸ ಪಿಂಚಣಿ ಯೋಜನೆ ವಿರೋಧಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಅಧೀನ ನ್ಯಾಯಾಲಯದ ನೌಕರರು [ಚುಟುಕು]

Bar & Bench

ಹೊಸ ʼವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಪಿಂಚಣಿ ಯೋಜನೆʼ (ಡಿಸಿಪಿಎಸ್‌) ಪ್ರಶ್ನಿಸಿ ರಾಜ್ಯ ನ್ಯಾಯಾಂಗ ನೌಕರರ ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಹೈಕೋರ್ಟ್ ರಿಜಿಸ್ಟ್ರಾರ್ ಮತ್ತು ಮಹಾರಾಷ್ಟ್ರ ರಾಜ್ಯ ಕಾನೂನು ಮತ್ತು ನ್ಯಾಯ ಇಲಾಖೆಯಿಂದ ಪ್ರತಿಕ್ರಿಯೆ ಕೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರತಿವಾದಿಗಳೂ ಅಫಿಡವಿಟ್‌ ಸಲ್ಲಿಸಬೇಕೆಂದು ಸೂಚಿಸಿದ ನ್ಯಾಯಮೂರ್ತಿಗಳಾದ ಎಕೆ ಮೆನನ್ ಮತ್ತು ಎಂಎಸ್ ಕಾರ್ಣಿಕ್ ಅವರಿದ್ದ ಪೀಠ ಎರಡು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿತು. ಸಿ ಗ್ರೂಪ್‌ ನೌಕರರ ಒಕ್ಕೂಟದಲ್ಲಿ ಮಹಾರಾಷ್ಟ್ರ ಅಧೀನ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಂಗ ನೌಕರರೂ ಇದ್ದಾರೆ. ನವೆಂಬರ್ 1, 2005ರ ನಂತರ ನೇಮಕಗೊಂಡ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಸೌಲಭ್ಯ ಒದಗಿಸಿರುವ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ಜಾಲತಾಣದ ಲಿಂಕ್‌ ಗಮನಿಸಿ.