ಕರ್ನಾಟಕ ಹೈಕೋರ್ಟ್‌ಗೆ ಏಪ್ರಿಲ್ 29ರಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ. ಆದರೆ, ವಾಸ್ತವದಲ್ಲಿ ಏಪ್ರಿಲ್ 26ರಿಂದಲೇ ಹೈಕೋರ್ಟ್‌ಗೆ ರಜೆ ಇರಲಿದೆ.
ಪ್ರಧಾನ ಪೀಠದಲ್ಲಿ ಏಪ್ರಿಲ್ 30 ಮತ್ತು ಮೇ 2ರಂದು ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್ ಪ್ರಸಾದ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ಕಾರ್ಯ ನಿರ್ವಹಿಸಲಿದೆ. ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್ ಮತ್ತು ವಿ ಶ್ರೀಶಾನಂದ ಅವರ ನೇತೃತ್ವದ ಏಸಕದಸ್ಯ ಪೀಠಗಳು ರಜಾಕಾಲೀನ ಪೀಠಗಳಾಗಿ ಕರ್ತವ್ಯ ನಿರ್ವಹಿಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇ ಎಸ್ ಇಂದಿರೇಶ್ ಮತ್ತು ರವಿ ವಿ. ಹೊಸಮನಿ ಅವರು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದು, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಅಶೋಕ್ ಎಸ್. ಕಿಣಗಿ ಮತ್ತು ಕೆ ವಿ ಅರವಿಂದ್ ಅವರು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ಮುಗಿಸಿ, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತುಕೊಳ್ಳಲಿದ್ದಾರೆ.
ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 7 ಮತ್ತು 9ರಂದು ನ್ಯಾಯಮೂರ್ತಿಗಳಾದ ಎಸ್ ಸುನೀಲ್ ದತ್ ಯಾದವ್ ಮತ್ತು ಟಿ ವೆಂಕಟೇಶ್ ನಾಯ್ಕ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿಗಳಾದ ಎಂ ಜಿ ಉಮಾ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ಏಕಸದಸ್ಯ ಪೀಠಗಳು ಅರ್ಜಿಗಳ ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ಮೇ 9ರಂದು ನ್ಯಾಯಮೂರ್ತಿಗಳಾದ ಸಚಿನ್ ಶಂಕರ್ ಮಗದುಮ್ ಮತ್ತು ಅನಂತ್ ರಾಮನಾಥ್ ಹೆಗ್ಡೆ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣ ಆಲಿಸಲಿದೆ. ನಂತರ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ಮೇ 9ರಂದು ನ್ಯಾಯಮೂರ್ತಿಗಳಾದ ಕೆ ಎಸ್ ಹೇಮಲೇಖಾ ಮತ್ತು ಜಿ ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ನಡೆಸಲಿದೆ. ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದಲ್ಲಿ ಕುಳಿತು ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 14 ಮತ್ತು 16ರಂದು ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಮತ್ತು ಜೆ ಎಂ ಖಾಜಿ ಅವರು ವಿಭಾಗೀಯ ಪೀಠದಲ್ಲಿ ಪ್ರಕರಣಗಳ ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿಗಳಾದ ಎಚ್ ಪಿ ಸಂದೇಶ್ ಹಾಗೂ ಜ್ಯೋತಿ ಮೂಲಿಮನಿ ಅವರ ನೇತೃತ್ವದ ಏಕಸದಸ್ಯ ಪೀಠವು ಕರ್ತವ್ಯ ನಿರ್ವಹಿಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ವಿಭಾಗೀಯ ಪೀಠವು ಮೊದಲಿಗೆ ಪ್ರಕರಣ ಆಲಿಸಿ, ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದ ಪ್ರಕರಣಗಳನ್ನು ಪ್ರತ್ಯೇಕವಾಗಿ ಆಲಿಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಂ ಐ ಅರುಣ್ ಮತ್ತು ರಾಜೇಶ್ ರೈ ಕೆ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 21ರ ಮತ್ತು 23ರಂದು ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣ ಕುಮಾರ್ ಮತ್ತು ರಾಮಚಂದ್ರ ಡಿ. ಹುದ್ದಾರ್ ಅವರ ನೇತೃತ್ವದ ವಿಭಾಗೀಯ ಪೀಠ, ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಹಾಗೂ ಎಸ್ ರಾಚಯ್ಯ ಅವರ ನೇತೃತ್ವದ ಏಕಸದಸ್ಯ ಪೀಠವುಗಳು ಅರ್ಜಿಗಳ ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್ ಟಿ ನರೇಂದ್ರ ಪ್ರಸಾದ್ ಮತ್ತು ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಕರಣ ವಿಚಾರಣೆ ನಡೆಸಲಿದೆ. ಬಳಿಕ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಆರ್ ನಟರಾಜ್ ಮತ್ತು ಉಮೇಶ್ ಎಂ. ಅಡಿಗ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ ವಿಚಾರಣೆ ನಡೆಯಲಿದ್ದು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಯಲಿದೆ.
ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ (ಜುಡಿಷಿಯಲ್) ಎಂ ಚಂದ್ರಶೇಖರ್ ರೆಡ್ಡಿ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.