Karnataka High Court 
ಸುದ್ದಿಗಳು

ಕರ್ನಾಟಕ ಹೈಕೋರ್ಟ್‌ನ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂಗೊಳಿಸಲು ಶಿಫಾರಸ್ಸು ಮಾಡಿದ ಸುಪ್ರೀಂ ಕೊಲಿಜಿಯಂ

ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರುವ ಅನಂತ್‌ ರಾಮನಾಥ್‌ ಹೆಗ್ಡೆ ಮತ್ತು ಕೆ ಎಸ್‌ ಹೇಮಲೇಖಾ ಅವರನ್ನು ಕಾಯಂಗೊಳಿಸಲು ಶಿಫಾರಸ್ಸು ಮಾಡಲಾಗಿದೆ.

Bar & Bench

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರುವ ಅನಂತ್‌ ರಾಮನಾಥ್‌ ಹೆಗ್ಡೆ ಮತ್ತು ಕೆ ಎಸ್‌ ಹೇಮಲೇಖಾ ಅವರನ್ನು ಕಾಯಂಗೊಳಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

ಇನ್ನೊಬ್ಬರು ಹೆಚ್ಚುವರಿ ನ್ಯಾಯಮೂರ್ತಿಯಾಗಿರುವ ಎಸ್‌ ರಾಚಯ್ಯ ಅವರನ್ನು ಹೊಸದಾಗಿ ಅಂದರೆ ನವೆಂಬರ್‌ 8ರಿಂದ ಮತ್ತೊಂದು ವರ್ಷ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ಕರ್ತವ್ಯ ನಿರ್ವಹಿಸಲು ಶಿಫಾರಸ್ಸು ಮಾಡಲಾಗಿದೆ.

ಮೂವರೂ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂಗೊಳಿಸಲು ಹೈಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದರು.

ನಿಯಮದ ಪ್ರಕಾರ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ಪದೋನ್ನತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾರ್ಯಚಟುವಟಿಕೆಯ ಬಗ್ಗೆ ಅರಿವಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಆನಂತರ ಅಭ್ಯರ್ಥಿಗಳ ಅರ್ಹತೆ ಮತ್ತು ಸೂಕ್ತತೆಗೆ ಸಂಬಂಧಿಸಿದಂತೆ ಲಭ್ಯವಿರುವ ದಾಖಲೆಗಳನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಪರಿಶೀಲಿಸಿ ನಿರ್ಧಾರ ಕೈಗೊಂಡಿದೆ.