Justice Satish Chandra Sharma, Justice Augustine George Masih, Justice Sandeep Mehta 
ಸುದ್ದಿಗಳು

ಮೂರು ಹೈಕೋರ್ಟ್‌ಗಳ ಸಿಜೆಗಳನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸ್ಸು ಮಾಡಿದ ಕೊಲಿಜಿಯಂ

ದೆಹಲಿ, ರಾಜಸ್ಥಾನ & ಗುವಾಹಟಿ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್‌ ಚಂದ್ರ ಶರ್ಮಾ, ಅಗಸ್ಟೀನ್‌ ಜಾರ್ಜ್‌ ಮಸಿಹ್‌ ಮತ್ತು ಸಂದೀಪ್‌ ಮೆಹ್ತಾ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸ್ಸು ಮಾಡಲಾಗಿದೆ.

Bar & Bench

ದೇಶದ ಮೂರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ದೆಹಲಿ, ರಾಜಸ್ಥಾನ ಮತ್ತು ಗುವಾಹಟಿ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್‌ ಚಂದ್ರ ಶರ್ಮಾ, ಅಗಸ್ಟೀನ್‌ ಜಾರ್ಜ್‌ ಮಸಿಹ್‌ ಮತ್ತು ಸಂದೀಪ್‌ ಮೆಹ್ತಾ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸ್ಸು ಮಾಡಲಾಗಿದೆ.

ನ್ಯಾ. ಶರ್ಮಾ ಅವರು ಮಧ್ಯಪ್ರದೇಶವರಾಗಿದ್ದು, ನ್ಯಾಯಮೂರ್ತಿಗಳಾದ ಮಸಿಹ್‌ ಅವರು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಹಾಗೂ ನ್ಯಾ. ಮೆಹ್ತಾ ಅವರು ರಾಜಸ್ಥಾನ ಹೈಕೋರ್ಟ್‌ನವರಾಗಿದ್ದಾರೆ. 34 ನ್ಯಾಯಮೂರ್ತಿಗಳ ಹುದ್ದೆ ಹೊಂದಿರುವ ಸರ್ವೋಚ್ಚ ನ್ಯಾಯಾಲಯದಲ್ಲಿ ಸದ್ಯ 31 ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಅವರು ಕ್ರಿಸ್ಮಸ್‌ ವೇಳೆಗೆ ನಿವೃತ್ತರಾಗಲಿದ್ದಾರೆ.

ಹಿರಿತನ, ಅರ್ಹತೆ, ಕಾರ್ಯಕ್ಷಮತೆ, ಪ್ರಾಮಾಣಿಕತೆ ಮತ್ತು ಮಾತೃ ಹೈಕೋರ್ಟ್‌ಗಳ ವೈವಿಧ್ಯತೆ ಮತ್ತು ಸಾಮಾಜಿಕ ಹಿನ್ನೆಲೆ ಇತ್ಯಾದಿ ವಿಚಾರಗಳನ್ನು ಆಧರಿಸಿ ನ್ಯಾಯಮೂರ್ತಿಗಳಿಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಪದೋನ್ನತಿ ನೀಡಲು ಶಿಫಾರಸ್ಸು ಮಾಡಲಾಗಿದೆ ಎಂದು ಕೊಲಿಜಿಯಂ ನಿರ್ಣಯದಲ್ಲಿ ತಿಳಿಸಿದೆ.