Manish Sisodia, Supreme Court
Manish Sisodia, Supreme Court  Manish Sisodia's Facebook account
ಸುದ್ದಿಗಳು

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

Bar & Bench

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ ವಿ ಎನ್ ಭಟ್ಟಿ ಅವರಿದ್ದ ಪೀಠ ಈ ಆದೇಶ ಪ್ರಕಟಿಸಿದೆ. “ತನಿಖೆಯಲ್ಲಿ ಕೆಲ ಅನುಮಾನಾಸ್ಪದ ಅಂಶಗಳು ಪತ್ತೆಯಾಗಿವೆ. ರೂ 338 ಕೋಟಿ ವರ್ಗಾವಣೆಯಾಗಿರುವುದು ಸಾಬೀತಾಗಿದೆ. ನಾವು ಜಾಮೀನನ್ನು ತಿರಸ್ಕರಿಸಿದ್ದೇವೆ" ಎಂದು ನ್ಯಾಯಾಲಯ ಹೇಳಿದೆ.

ಮುಂದಿನ 6 ತಿಂಗಳಲ್ಲಿ ವಿಚಾರಣೆಯು ನಿಧಾನವಾಗಿ ನಡೆದರೆ ಸಿಸೋಡಿಯಾ ಅವರು ಈ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಕೂಡ ಪೀಠ ತಿಳಿಸಿದೆ.

ಈ ವರ್ಷ ಫೆಬ್ರವರಿ 26 ರಿಂದ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ಎರಡೂ ತನಿಖೆ ನಡೆಸುತ್ತಿವೆ. ಸಿಸೋಡಿಯಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಇತರ ಸದಸ್ಯರು ಲಂಚ ಪಡೆದು ಕೆಲವು ವ್ಯಾಪಾರಿಗಳಿಗೆ ಮದ್ಯದ ಪರವಾನಗಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಬಿಐ ಮತ್ತು ಇ ಡಿ ಪ್ರಕರಣಗಳೆರಡಲ್ಲೂ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್‌ ಈ ಹಿಂದೆ ಜಾಮೀನು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.