ಷೇರಿನ ಬೆಲೆಗಳನ್ನು ಅಕ್ರಮ ಮಾರ್ಗದ ಮೂಲಕ ಹೆಚ್ಚಿಸುವ ಮೂಲಕ ಅದಾನಿ ಸಂಸ್ಥೆ ವಂಚನೆ ಎಸಗಿದೆ ಎಂದು ಆರೋಪಿಸಿ ಹಿಂಡೆನ್‌ಬರ್ಗ್ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ತಾನು ಕಳೆದ ಜನವರಿ 3ರಂದು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮರುಪರಿಶೀಲನೆಯ ಅಂಶ ಕಂಡುಬರುತ್ತಿಲ್ಲ ಎಂದು ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿಲ್ಲ.
"ದಾಖಲೆಗಳ ಪ್ರಕಾರ ಯಾವುದೇ ದೋಷ ಕಂಡುಬಂದಿಲ್ಲ. ಸುಪ್ರೀಂ ಕೋರ್ಟ್ ನಿಯಮಾವಳಿ 2013 ರ ಆದೇಶ XLVII ನಿಯಮ 1ರ ಅಡಿಯಲ್ಲಿ ಮರುಪರಿಶೀಲನೆಗೆ ಯಾವುದೇ ಅಂಶ ಕಂಡುಬರುತ್ತಿಲ್ಲ. ಆದ್ದರಿಂದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.