A1
ಸುದ್ದಿಗಳು

ಭೂಸ್ವಾಧೀನದ ವೇಳೆ ಹಕ್ಕು ಉಲ್ಲಂಘನೆ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ₹ 50,000 ದಂಡ ವಿಧಿಸಿದ ಸುಪ್ರೀಂ [ಚುಟುಕು]

Bar & Bench

ಭೂಸ್ವಾಧೀನದ ಸಮಯದಲ್ಲಿ ಕೆಲವು ವ್ಯಕ್ತಿಗಳ ಹಕ್ಕುಗಳನ್ನು ಕಡೆಗಣಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ₹ 50,000 ದಂಡ ವಿಧಿಸಿದೆ. ದಶಕಗಳ ಕಾಲ ಭೂಒಡೆತನದಿಂದ ದೂರ ಉಳಿದಿದ್ದ ಕಕ್ಷಿದಾರರು ಕಡೆಗೆ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣ ಇದು.

ವಿದ್ಯಾದೇವಿ ಮತ್ತು ಹಿಮಾಚಲ ಪ್ರದೇಶ ಸರ್ಕಾರ ನಡುವಣ ಪ್ರಕರಣದಲ್ಲಿ ತಾನು ನೀಡಿದ್ದ ತೀರ್ಪನ್ನು ಅವಲಂಬಿಸಿರುವ ನ್ಯಾಯಾಲಯ ಕಾನೂನು ಪ್ರಕ್ರಿಯೆ ಪಾಲಿಸದೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಹೊರಹಾಕಿದರೆ, ಅದು 300ಎ ವಿಧಿಯ ಉಲ್ಲಂಘನೆಯಾಗುತ್ತದೆ ಎಂದಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.