ಆರೋಪಿಗೆ ಜಾಮೀನು ಮಂಜೂರು ಮಾಡುವ ಮ್ಯಾಜಿಸ್ಟ್ರೇಟ್ ಆದೇಶ ಪ್ರಶ್ನಿಸಿ ಸಂವಿಧಾನದ 32ನೇವಿಧಿಯಡಿ ರಿಟ್ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ₹ 5,000 ದಂಡ ವಿಧಿಸಿದೆ. ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ನೇರವಾಗಿ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ತಿಳಿಸಿತು. ಅಲ್ಲದೆ ಜಾಮೀನು ನೀಡಿದ ನ್ಯಾಯಾಧೀಶರು ಮತ್ತು ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಬಯಸದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರನ್ನು ಏಕೆ ಪಕ್ಷಕಾರರನ್ನಾಗಿ ಮಾಡಿಕೊಳ್ಳಲಾಗಿದೆ ಎಂಬುದು ನಮಗೆ ಅರ್ಥವಾಗಲಿಲ್ಲ ಎಂದು ಕಿಡಿಕಾರಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.