Supreme Court 
ಸುದ್ದಿಗಳು

ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ: ಉ. ಪ್ರದೇಶ ಸರ್ಕಾರದ ಆದೇಶಕ್ಕೆ ಸುಪ್ರೀಂ ತಡೆ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಪತ್ರ ಆಧರಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮನವಿ ಸಲ್ಲಿಸಿತ್ತು.

Bar & Bench

ಮಾನ್ಯತೆ ಪಡೆಯದ ಮದರಸಾಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಅನುದಾನಿತ ಮದರಸಾಗಳಲ್ಲಿ ಓದುತ್ತಿರುವ ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸುವ ಸಂಬಂಧ ಉತ್ತರ ಪ್ರದೇಶ (ಯುಪಿ) ಸರ್ಕಾರ ಇತ್ತೀಚೆಗೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಪತ್ರ ಆಧರಿಸಿ  ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮನವಿ ಸಲ್ಲಿಸಿತ್ತು.

ಎನ್‌ಸಿಪಿಸಿಆರ್ ಪತ್ರಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

"ನೋಟೀಸ್ ನೀಡಿ. ಜೂನ್ ತಿಂಗಳಿನಲ್ಲಿ ಎನ್‌ಸಿಪಿಸಿಆರ್‌ ಬರೆದಿದ್ದ ಪತ್ರಗಳಿಗೆ ತಡೆ ನೀಡಲಾಗಿದ್ದು ಅಂತೆಯೇ ಅದಕ್ಕೆ ಸಂಬಂಧಿಸಿದ ಎಲ್ಲಾ ಕ್ರಮಗಳಿಗೆ ತಡೆ ನೀಡಲಾಗಿದೆ" ಎಂದು ನ್ಯಾಯಾಲಯ ಹೇಳಿದೆ.

ಮದರಸಾ ಕಾಯಿದೆ- 2004ನ್ನು ರದ್ದುಗೊಳಿಸಬೇಕು ಎಂದು ಅಲಾಹಾಬಾದ್ ಹೈಕೋರ್ಟ್ ಮಾರ್ಚ್ 22ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮತ್ತೊಂದು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

ತೀರ್ಪಿಗೆ ಸುಪ್ರೀಂ ಕೋರ್ಟ್ ಏಪ್ರಿಲ್ 5 ರಂದು ತಡೆ ನೀಡಿತ್ತು .