ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಾಹಿ-ಈದ್ಗಾ ಮಸೀದಿಯ ಆವರಣವನ್ನು ಪರಿಶೀಲಿಸಲು ನ್ಯಾಯಾಲಯದ ಆಯುಕ್ತರನ್ನು ನೇಮಿಸಲು ಅನುಮತಿಸಿರುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಹಿರಿಯ ವಕೀಲ ಹುಜೇಫಾ ಅಹ್ಮದಿ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ ವಿ ಎನ್ ಭಟ್ಟಿ ಅವರ ವಿಭಾಗೀಯ ಪೀಠದ ಮುಂದೆ ಈ ವಿಷಯವನ್ನು ಇಂದು ಉಲ್ಲೇಖಿಸಿದರು.
ಆದರೆ, ನ್ಯಾಯಾಲಯವು ಮನವಿ ಒಪ್ಪಲು ನಿರಾಕರಿಸಿತು. ಪ್ರಕರಣದ ವಿಚಾರಣೆಯನ್ನು ಜನವರಿ 2024ರಲ್ಲಿ ಪರಿಗಣಿಸುವುದಾಗಿ ಹೇಳಿತು.
ಮಥುರಾ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣ ಜನ್ಮಭೂಮಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪ ಪ್ರಕರಣದ ಕೇಂದ್ರಬಿಂದುವಾಗಿದೆ.