Supreme Court of India

 
A1
ಸುದ್ದಿಗಳು

ಡಿಜಿಪಿಯಾಗಿ ಎಸ್ ಕೆ ಸಿಂಘಾಲ್ ನೇಮಕ ಪ್ರಶ್ನಿಸಿದ್ದ ಅರ್ಜಿ: ಬಿಹಾರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ [ಚುಟುಕು]

Bar & Bench

ಎಸ್‌ ಕೆ ಸಿಂಘಾಲ್ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಬಿಹಾರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಈ ನೇಮಕಾತಿ ಪ್ರಕಾಶ್ ಸಿಂಗ್ ಮತ್ತು ಕೇಂದ್ರ ಸರ್ಕಾರ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನರೇಂದ್ರ ಕುಮಾರ್ ಧೀರಾಜ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠ ನೋಟಿಸ್‌ ನೀಡಿತು.