Abhishek Banerjee and Supreme Court
Abhishek Banerjee and Supreme Court 
ಸುದ್ದಿಗಳು

ಶಾಲಾ ನೇಮಕಾತಿ ಹಗರಣ: ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ತನಿಖೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Bar & Bench

ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಪಿ ಎಸ್ ನರಸಿಂಹ ಅವರಿದ್ದ ಪೀಠ ಆದೇಶಿಸಿದೆ.

ಪ್ರಕರಣವನ್ನು ಏಪ್ರಿಲ್ 24, 2023ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿರುವ ನ್ಯಾಯಾಲಯ ಅಲ್ಲಿಯವರೆಗೂ ಅಭಿಷೇಕ್‌ ವಿರುದ್ಧದ ಎಲ್ಲಾ ತನಿಖೆಗೆ ತಡೆ ನೀಡಿತು. ಅಭಿಷೇಕ್‌  ಬ್ಯಾನರ್ಜಿ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಸರ್ಕಾರಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಅಕ್ರಮಗಳಲ್ಲಿ ಅಭಿಷೇಕ್‌ ಬ್ಯಾನರ್ಜಿ ಪಾತ್ರದ ಬಗ್ಗೆ ಇ ಡಿ ಹಾಗೂ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್‌ ಏಪ್ರಿಲ್ 13 ರಂದು ಆದೇಶಿಸಿತ್ತು.