<div class="paragraphs"><p>Prisons and Supreme Court</p></div>

Prisons and Supreme Court

 
ಸುದ್ದಿಗಳು

ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದ 70ರ ವಯೋಮಾನದ ಇಬ್ಬರ ಶಿಕ್ಷೆ ಅಮಾನತಿನಲ್ಲಿರಿಸಿದ ಸುಪ್ರೀಂ ಕೋರ್ಟ್‌

Bar & Bench

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 9 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ 70 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಅಪರಾಧಿಗಳ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶಿಸಿದೆ. 1983ರಲ್ಲಿ ಕೃತ್ಯ ನಡೆದ ವೇಳೆ ತಾನು ಅಪ್ರಾಪ್ತನಾಗಿದ್ದೆ ಎಂದು ಹೇಳಿಕೊಂಡ ಮೂರನೇ ಅಪರಾಧಿಯ ಶಿಕ್ಷೆಯನ್ನೂ ನ್ಯಾಯಾಲಯವು ಇದೇ ವೇಳೆ ಅಮಾನತಿನಲ್ಲಿರಿಸಿದೆ. ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಟ್ನಾ ಹೈಕೋರ್ಟ್‌ ಈ ಹಿಂದೆ ಎತ್ತಿಹಿಡಿದಿತ್ತು. ಇದನ್ನು ಈ ಮೂವರೂ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.