Bibhav Kumar 
ಸುದ್ದಿಗಳು

ಸ್ವಾತಿ ಮಾಲೀವಾಲ್ ಹಲ್ಲೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ದೆಹಲಿ ಮುಖ್ಯಮಂತ್ರಿ ಸಹಾಯಕ ಬಿಭವ್

Bar & Bench

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲೀವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ [ಬಿಭವ್‌ ಕುಮಾರ್‌ ಮತ್ತು ದೆಹಲಿ ಸರ್ಕಾರ ನಡುವಣ ಪ್ರಕರಣ].

ಸುಪ್ರೀಂ ಕೋರ್ಟ್‌‌ ಪ್ರಕರಣದ ವಿಚಾರಣಾ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ. ದೆಹಲಿ ಪೊಲೀಸರು ಮೇ 18 ರಂದು ಕುಮಾರ್ ಅವರನ್ನು ಬಂಧಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಆಪ್‌ನ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲೀವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್‌ ಕುಮಾರ್ ಮೇಲಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದ ಕೇಜ್ರಿವಾಲ್‌ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಲು ಮಾಲೀವಾಲ್‌ ಮೇ 13 ರಂದು ಯತ್ನಿಸಿದ್ದರು. ಆಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.