Kavitha Kalvakuntla, Supreme court
Kavitha Kalvakuntla, Supreme court 
ಸುದ್ದಿಗಳು

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Bar & Bench

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ಸಮನ್ಸ್‌ ನೀಡಿದ್ದನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ,  ಕವಿತಾ ಕಲ್ವಕುಂಟ್ಲ ಅವರು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಕವಿತಾ ಅವರು ತೆಲಂಗಾಣ ವಿಧಾನಪರಿಷತ್‌ ಸದಸ್ಯೆಯಾಗಿದ್ದು, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರ ಪುತ್ರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11 ರಂದು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ ಡಿ) ಮಾರ್ಚ್ 16 ರಂದು ಮತ್ತೊಮ್ಮೆ ಅವರಿಗೆ ಸಮನ್ಸ್ ನೀಡಿತ್ತು.

ಮಹಿಳೆಗೆ ಇ ಡಿ ಸಮನ್ಸ್‌ ನೀಡಿರುವುದು ಸಂಪೂರ್ಣವಾಗಿ ಕಾನೂನಿಗೆ ವಿರುದ್ಧ ಎಂದು ಕವಿತಾ ಅವರ ಪರ ವಕೀಲರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ನ್ಯಾ. ಪಿ ಎಸ್‌ ನರಸಿಂಹ ಅವರನ್ನೊಳಗೊಂಡ ಪೀಠದೆದುರು ಪ್ರತಿಪಾದಿಸಿದರು.

ಆದರೆ ಸಮನ್ಸ್‌ಗೆ ತಡೆ ನೀಡಲು ಅಥವಾ ಪ್ರಕರಣದ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸಿಜೆಐ ಅವರು ಪ್ರಕರಣವನ್ನು ಮಾರ್ಚ್ 24ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದರು.