Justice MG Priyadarsini 
ಸುದ್ದಿಗಳು

ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ. ಪ್ರಿಯದರ್ಶಿನಿ ನಿಧನ

ಸೋಮವಾರ ನ್ಯಾಯಮೂರ್ತಿಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

Bar & Bench

ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಜಿ. ಪ್ರಿಯದರ್ಶಿನಿ ಭಾನುವಾರ ಬೆಳಿಗ್ಗೆ ನಿಧನರಾದರು.  ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನಲ್ಲಿ ಇರಿಸಲಾಗಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

ಅವರು ತೆಲಂಗಾಣ ಹೈಕೋರ್ಟ್‌ನಲ್ಲಿ   16 ನೇ ಹಿರಿಯ ನ್ಯಾಯಮೂರ್ತಿಯಾಗಿದ್ದು ಮುಂದಿನ ವರ್ಷ ನಿವೃತ್ತರಾಗಲಿದ್ದರು.  

ನ್ಯಾಯಮೂರ್ತಿ ಪ್ರಿಯದರ್ಶಿನಿ ಅವರು ವಿಶಾಖಪಟ್ಟಣಂನ ಎನ್‌ಬಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಸೆಪ್ಟೆಂಬರ್ 1995 ರಲ್ಲಿ ವಕೀಲ ವೃತ್ತಿ ಆರಂಭಿಸಿದರು.

ಅವರು ನವೆಂಬರ್ 2008ರಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆಗೆ ಸೇರಿದ್ದು ಮಾರ್ಚ್ 24, 2022ರಂದು ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು.