Supreme Court

 
ಸುದ್ದಿಗಳು

ಲಾವಣ್ಯ ಆತ್ಮಹತ್ಯೆ ಪ್ರಕರಣ ಸಿಬಿಐಗೆ: ಪ್ರತಿವಾದಿಗಳಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್ [ಚುಟುಕು]

Bar & Bench

ತಂಜಾವೂರು ವಿದ್ಯಾರ್ಥಿನಿ ಲಾವಣ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಿರ್ದೇಶಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಡಿಜಿಪಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಅದರೆ, ಹೈಕೋರ್ಟ್‌ ಆದೇಶದಂತೆ ನಡೆಯುತ್ತಿರುವ ತನಿಖೆಗೆ ತಡೆ ನೀಡಲು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠ ನಿರಾಕರಿಸಿತು.

ಲಾವಣ್ಯ ಸಾವಿನ ಹಿಂದೆ ಮತಾಂತರ ಕೈವಾಡ ಇದೆ ಎಂಬ ಆರೋಪ ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಬಿಜೆಪಿ ಮತ್ತು ಆಡಳಿತಾರೂಢ ಡಿಎಂಕೆ ಪರಸ್ಪರ ವಾಗ್ವಾದ ನಡೆಸಿದ್ದವು. ಸುಪ್ರೀಂ ಕೋರ್ಟ್‌ ಮುಂದೆ ತಮಿಳುನಾಡು ಡಿಜಿಪಿ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಬಿಐಗೆ ಪ್ರಕರಣ ಹಸ್ತಾಂತರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸುವುದರ ಜೊತೆಗೆ, ವಿಚಾರಣೆ ವೇಳೆ ತಮಿಳುನಾಡು ಪೊಲೀಸರ ತನಿಖೆಯ ಬಗ್ಗೆ ಹೈಕೋರ್ಟ್‌ ವ್ಯಕ್ತಪಡಿಸಿದದ ಅಭಿಪ್ರಾಯವನ್ನು ಕೈಬಿಡುವಂತೆ ಕೋರಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್‌ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.