Union Bank of India, CBI and Karnataka HC 
ಸುದ್ದಿಗಳು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸರ್ಕಾರದಿಂದ ಆಕ್ಷೇಪಣೆ ಸಲ್ಲಿಕೆ; ಸೆ.23ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಅಟಾರ್ನಿ ಜನರಲ್‌ ಕೆ ವೆಂಕಟರಮಣಿ “ರಾಜ್ಯ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಮಾಹಿತಿ ಇದೆ” ಎಂದರು. ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ “ಬೆಳಿಗ್ಗೆ ಆಕ್ಷೇಪಣೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

Bar & Bench

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರವು ಬುಧವಾರ ಆಕ್ಷೇಪಣೆ ಸಲ್ಲಿಸಿದೆ.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅಟಾರ್ನಿ ಜನರಲ್‌ ಕೆ ವೆಂಕಟರಮಣಿ ಅವರು “ರಾಜ್ಯ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಮಾಹಿತಿ ಇದೆ” ಎಂದರು. ಆಗ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಬೆಳಿಗ್ಗೆಯೇ ಆಕ್ಷೇಪಣೆ ಸಲ್ಲಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಯೂನಿಯನ್ ಬ್ಯಾಂಕ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು” ಎಂದರು.

ಎಲ್ಲರ ವಾದ ಆಲಿಸಿದ ಪೀಠವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 23ರ ಮಧ್ಯಾಹ್ನ ನಡೆಸಲಾಗುವುದು ಎಂದು ಹೇಳಿ ವಿಚಾರಣೆ ಮುಂದೂಡಿತು.