sexual harassment 
ಸುದ್ದಿಗಳು

ಸಂತ್ರಸ್ತೆ ಅಪಹರಣ ಪ್ರಕರಣ: ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ

Bar & Bench

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಅಪಹರಣ ಪ್ರಕರದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್‌ ಬಾಬು ಅವರನ್ನು ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್‌) ನ್ಯಾಯಾಲಯವು ನಾಲ್ಕು ದಿನ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತ ಸತೀಶ್‌ ಬಾಬು ಅವರನ್ನು ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್‌) ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್‌ ಅವರು ಎಸ್‌ಐಟಿ ವಶಕ್ಕೆ ನೀಡಿದರು.

ಈ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಎಚ್‌ ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸತ್ರ) ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಇನ್ನು, ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸತೀಶ್‌ ಬಾಬುಗೆ ನೆರವಾದ ಆರೋಪದ ಮೇಲೆ ಬಂಧಿತರಾಗಿರುವ ಮಧು, ಮನು ಮತ್ತು ಸುಜಯ್‌ ಎಂಬವರನ್ನು ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್‌) ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಆಕೆಯ ಪುತ್ರ ನೀಡಿದ ದೂರಿನ ಅನ್ವಯ ಕೆ ಆರ್‌ ನಗರ ಠಾಣೆಯಲ್ಲಿ ಎಚ್‌ ಡಿ ರೇವಣ್ಣ ಮತ್ತು ಸತೀಶ್‌ ಬಾಬು ವಿರುದ್ಧ ಐಪಿಸಿ ಸೆಕ್ಷನ್‌ 364ಎ, 365 ಜೊತೆಗೆ 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.