A S Ponnanna, CM Legal Advisor  
ಸುದ್ದಿಗಳು

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾಗಿ ಶಾಸಕ ಪೊನ್ನಣ್ಣ ನೇಮಕ

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮತ್ತು ಆನಂತರದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಒಟ್ಟು ಆರು ವರ್ಷಗಳ ಕಾಲ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕೆಲಸ ಮಾಡಿದ ಅನುಭವ ಪೊನ್ನಣ್ಣ ಅವರಿಗಿದೆ.

Bar & Bench

ಕೊಡಗು ಜಿಲ್ಲೆಯ ವಿರಾಜಪೇಟೆಯ ಶಾಸಕ ಎ ಎಸ್‌ ಪೊನ್ನಣ್ಣ ಅವರನ್ನು ಕಾನೂನು ಸಲಹೆಗಾರರನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕ ಮಾಡಿಕೊಂಡಿದ್ದಾರೆ. ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಮುಖ್ಯಮಂತ್ರಿ ಆದೇಶ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ವಕೀಲರೂ ಆದ ಪೊನ್ನಣ್ಣ ಅವರು ಚುನಾವಣೆಗೂ ಮುನ್ನ ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥರಾಗಿದ್ದರು.

ಇದಕ್ಕೂ ಮುನ್ನ, 2013-2018ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮತ್ತು ಆನಂತರದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ ವೇಳೆ ಒಟ್ಟು ಆರು ವರ್ಷಗಳ ಕಾಲ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕೆಲಸ ಮಾಡಿದ ಅನುಭವ ಪೊನ್ನಣ್ಣ ಅವರಿಗಿದೆ.