Divorce 
ಸುದ್ದಿಗಳು

ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್ [ಚುಟುಕು]

Bar & Bench

ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ [ಶೈಲೇಂದ್ರ ಕುಮಾರ್ ಚಂದ್ರ ಮತ್ತು ಭಾರತಿ ಚಂದ್ರ ನಡುವಣ ಪ್ರಕರಣ].

ಪ್ರಕರಣವೊಂದರ ವಿಚಾರಣೆ ವೇಳೆ ಪತಿ ಪತ್ನಿಯ ನಡುವೆ ಭಿನ್ನಾಭಿಪ್ರಾಯ ತಲೆದೋರಿದ ಕಾರಣ ಮದುವೆಯಾದ ಎರಡೇ ತಿಂಗಳಲ್ಲಿ ಸಂಸಾರ ಒಡೆದಿರುವುದನ್ನು ನ್ಯಾಯಾಲಯ ಗಮನಿಸಿತು. ಗಂಡನ ಮನೆ ಬಿಟ್ಟು ಹೆಂಡತಿ ಪದೇಪದೇ ತವರು ಮನೆಗೆ ಹೋಗುತ್ತಿದ್ದಳು. ಪತ್ನಿಯ ತಂದೆ ಕೂಡ ತನ್ನ ಮನೆಯಲ್ಲೇ ವಾಸಿಸಲು ಅಳಿಯನಿಗೆ ಒತ್ತಾಯಿಸುತ್ತಿದ್ದರು. ಪತಿ ಹಲವು ಬಾರಿ ರಾಜಿಗೆ ಮುಂದಾದರೂ ಅದು ವ್ಯರ್ಥವಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿತು.

ತನಗೆ ವಿಚ್ಛೇದನ ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯವೊಂದರ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಗೌತಮ್ ಭಾದುರಿ ನೇತೃತ್ವದ ಪೀಠದಲ್ಲಿ ನಡೆಯಿತು. ಈ ಹಿನ್ನೆಲೆಯಲ್ಲಿ ಪತಿಗೆ ಮಾನಸಿಕ ಕಿರುಕುಳ ನೀಡಿರುವುದನ್ನು ಆಧರಿಸಿ ನ್ಯಾಯಾಲಯ ದಂಪತಿಗೆ ವಿಚ್ಛೇದನ ನೀಡಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.