Senthil Balaji, Madras High Court 
ಸುದ್ದಿಗಳು

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ: ಮದ್ರಾಸ್ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಸಚಿವರ ಪತ್ನಿ

ಪ್ರಕರಣದ ಸಂಖ್ಯೆ ನಮೂದಾದ ಬಳಿಕ ಮಧ್ಯಾಹ್ನ 1.30ಕ್ಕೆ ಪ್ರಕರಣವನ್ನು ಉಲ್ಲೇಖಿಸುವಂತೆ ನ್ಯಾಯಾಲಯ ಸೂಚಿಸಿತು.

Bar & Bench

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮ ಪತಿ ತಮಿಳುನಾಡು ಸಚಿವ ವಿ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಎಸ್ ಮೇಗಲಾ ಮದ್ರಾಸ್ ಹೈಕೋರ್ಟ್‌ಗೆ ಬುಧವಾರ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಂ ಸುಂದರ್ ಮತ್ತು ಆರ್ ಶಕ್ತಿವೇಲ್ ಅವರಿದ್ದ ಪೀಠದೆದುರು ಹಿರಿಯ ವಕೀಲ ಎನ್ ಆರ್ ಇಳಂಗೋ ಪ್ರಸ್ತಾಪಿಸಿದರು, ತಮ್ಮ ಕಕ್ಷಿದಾರರನ್ನು ಯಾವುದೇ ನೋಟಿಸ್‌ ಅಥವಾ ಸಮನ್ಸ್‌ ನೀಡದೆ ಬಂಧಿಸಲಾಗಿದೆ ಎಂದು ಅವರು ದೂರಿದರು.  ಆಗ ಪ್ರಕರಣದ ಸಂಖ್ಯೆ ನಮೂದಿಸಿಕೊಂಡ ಬಳಿಕ ಮಧ್ಯಾಹ್ನ 1.30ಕ್ಕೆ ಪ್ರಕರಣವನ್ನು ಉಲ್ಲೇಖಿಸಲು ನ್ಯಾಯಾಲಯ ತಿಳಿಸಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ್ದ  ಜಾರಿ ನಿರ್ದೇಶನಾಲಯ ಬಳಿಕ ಸಚಿವ ಬಾಲಾಜಿ ಅವರನ್ನು ಬಂಧಿಸಿತ್ತು. 2011 ರಿಂದ 2015 ರವರೆಗೆ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ವೇಳೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಪ್ರಕರಣದ ಸಂಬಂಧ ಮೇ 16 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಸೂಚಿಸಿದ್ದ ಮದ್ರಾಸ್‌ ಹೈಕೋರ್ಟ್‌ ತೀರ್ಪನ್ನು ಸುಪ್ರೀಂ ಕೋರ್ಟ್‌ ಅಂದು ರದ್ದುಗೊಳಿಸಿತ್ತು. ಬದಲಿಗೆ ತನಿಖೆ ಮುಂದುವರೆಸಲು ಅದು ಜಾರಿ ನಿರ್ದೇಶನಾಲಯಕ್ಕೆ ಅನುಮತಿಸಿತ್ತು.