Dileep with Kerala HC
ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕೊಲೆ ಯತ್ನ ಪ್ರಕರಣದಲ್ಲಿ ನಟ ದಿಲೀಪ್‌ಗೆ ನಿರೀಕ್ಷಣಾ ಜಾಮೀನು ಕೋರಿದ್ದ ಅವರ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಲಾಗುವುದು ಎಂದು ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣವನ್ನು ತಿರುಚುತ್ತಿದ್ದಾರೆ ಎಂದು ವಕೀಲರು ಆಪಾದಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಆರೋಪಿಸಿ ದಿಲೀಪ್ ಸೇರಿದಂತೆ ಐವರ ವಿರುದ್ಧ ಕೇರಳ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.