High Court of Karnataka 
ಸುದ್ದಿಗಳು

ಇಂದಿನಿಂದ ಹೈಕೋರ್ಟ್‌ಗೆ ಚಳಿಗಾಲದ ರಜೆ, ಜ.6ಕ್ಕೆ ಕಲಾಪ ಪುನಾರಂಭ; ಮೂರು ದಿನಗಳು ನಡೆಯಲಿದೆ ರಜಾಕಾಲೀನ ಪೀಠ

ಹೊಸ ವರ್ಷದ ಮೊದಲ ದಿನದ ಬಳಿಕ ಗುರುವಾರ (ಜ.2) ಮತ್ತು ಶುಕ್ರವಾರ (ಜ.3) ಆನಂತರ ವಾರಾಂತ್ಯವಿರಲಿದೆ. ಮೇಲಿನ ಎರಡೂ ದಿನಗಳ ರಜೆಯನ್ನು ನಿಗದಿತ ಶನಿವಾರದಂದು ಕಲಾಪ ನಡೆಸುವ ಮೂಲಕ ಹೊಂದಾಣಿಕೆ ಮಾಡಲಾಗುತ್ತದೆ ಎನ್ನಲಾಗಿದೆ.

Bar & Bench

ಕರ್ನಾಟಕ ಹೈಕೋರ್ಟ್‌ಗೆ ಶನಿವಾರ, ಡಿ.21ರಿಂದ ಆರಂಭಿಸಿ ಡಿಸೆಂಬರ್‌ 31ರವರೆಗೆ ಚಳಿಗಾಲದ ರಜೆ ಇರಲಿದೆ. ಮಾರನೆಯ ದಿನ ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು, ಅಧಿಕೃತವಾಗಿ ಹೈಕೋರ್ಟ್‌ ಕಲಾಪವು ಜನವರಿ 6ರಿಂದ ಪುನಾರಂಭವಾಗಲಿದೆ.

ಹೊಸ ವರ್ಷದ ಮೊದಲ ದಿನದ ಬಳಿಕ ಗುರುವಾರ (ಜ.2) ಮತ್ತು ಶುಕ್ರವಾರ (ಜ.3) ಆನಂತರ ವಾರಾಂತ್ಯವಿರಲಿದ್ದು, ಮೇಲಿನ ಎರಡೂ ದಿನಗಳ ರಜೆಯನ್ನು ನಿಗದಿತ ಶನಿವಾರಗಳಂದು ಕಲಾಪ ನಡೆಸುವ ಮೂಲಕ ಹೊಂದಾಣಿಕೆ ಮಾಡಲಾಗುತ್ತದೆ ಎನ್ನಲಾಗಿದೆ.

ರಜಾಕಾಲದಲ್ಲೂ ಡಿಸೆಂಬರ್‌ 24, 27 ಮತ್ತು 31ರಂದು ತುರ್ತು ಪ್ರಕರಣಗಳ ವಿಚಾರಣೆಯನ್ನು ರಜಾಕಾಲೀನ ಪೀಠಗಳು ನಡೆಸಲಿವೆ.

ಡಿಸೆಂಬರ್‌ 24ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್‌ ಪ್ರಸಾದ್‌ ಮತ್ತು ವಿ ಶ್ರೀಶಾನಂದ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ರವಿ ವಿ. ಹೊಸಮನಿ ಮತ್ತು ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಅಶೋಕ್‌ ಎಸ್‌. ಕಿಣಗಿ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ಡಿಸೆಂಬರ್‌ 27ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಅನಂತ್‌ ರಾಮನಾಥ್‌ ಹೆಗ್ಡೆ ಹಾಗೂ ನ್ಯಾ. ಸಿ ಎಂ ಪೂಣಚ್ಚ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್‌ ಟಿ ನರೇಂದ್ರ ಕುಮಾರ್ ಮತ್ತು ಜಿ ಬಸವರಾಜ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಆರ್‌ ನಟರಾಜ್‌ ಮತ್ತು ಹಂಚಾಟೆ ಸಂಜೀವ್‌ಕುಮಾರ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ಡಿಸೆಂಬರ್‌ 31ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌ ಸುನಿಲ್‌ ದತ್‌ ಯಾದವ್ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಹಾಗೂ ನ್ಯಾ. ಹೇಮಂತ್‌ ಚಂದನ್‌ಗೌಡರ್‌ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇ ಎಸ್‌ ಇಂದಿರೇಶ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಂ ಐ ಅರುಣ್‌ ಮತ್ತು ಶಿವಶಂಕರ್‌ ಅಮರಣ್ಣವರ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ತುರ್ತು ಆದೇಶಗಳು, ತಡೆ ಆದೇಶಗಳು ಮತ್ತು ಮಧ್ಯಂತರ ನಿರ್ದೇಶನ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಪೀಠಗಳು ನಡೆಸಲಿವೆ ಎಂದು ನ್ಯಾಯಾಂಗ ರಿಜಿಸ್ಟ್ರಾರ್‌ ಸರಸ್ವತಿ ವಿಷ್ಣು ಕೋಸಂದರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

wiinter vacation 2024.pdf
Preview