Sajjan Kumar
Sajjan Kumar

ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜಾಮೀನು ಆದೇಶಕ್ಕೆ ತಡೆ ನೀಡಿದ ದೆಹಲಿ ಹೈಕೋರ್ಟ್

ಸಜ್ಜನ್ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಕೆಳ ನ್ಯಾಯಾಲಯದ ಆದೇಶವನ್ನು 1984ರ ಗಲಭೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್ಐಟಿ ಪ್ರಶ್ನಿಸಿತ್ತು.
Published on

1984ರ ಸಿಖ್‌ ವಿರೋಧಿ ಗಲಭೆಗೆ ಸಂಬಂಧಿಸಿದ ದಂಗೆ ಮತ್ತು ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ಜಾಮೀನು ನೀಡಿದ್ದ ಕೆಳ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಈ ಸಂಬಂಧ ನೋಟಿಸ್‌ ಜಾರಿಗೊಳಿಸಿದ ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರು ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದರು. ಕುಮಾರ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಆದೇಶವನ್ನು 1984ರ ಗಲಭೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಪ್ರಶ್ನಿಸಿತ್ತು.

Also Read
ಸಿಖ್‌, ಗೋಧ್ರಾ ಹತ್ಯಾಕಾಂಡ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಿ ಟಿ ನಾನಾವತಿ ನಿಧನ

ಸಜ್ಜನ್ ಕುಮಾರ್ ಘೋರ ಅಪರಾಧದಲ್ಲಿ ಭಾಗಿಯಾಗಿದ್ದು ಕೆಲ ಪ್ರಮುಖ ಸಾಕ್ಷಿಗಳನ್ನು ಇನ್ನೂ ವಿಚಾರಣೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯಗಳನ್ನು ತಿರುಚಬಹುದು ಎಂದು ಎಸ್‌ಐಟಿ ವಾದಿಸಿದೆ.

ಪ್ರಸ್ತುತ ಪ್ರಕರಣ, ತಂದೆ-ಮಗ ಜಸ್ವಂತ್ ಸಿಂಗ್ ಮತ್ತು ತರುಣ್ ದೀಪ್ ಸಿಂಗ್ ಅವರ ಹತ್ಯೆಗೆ ಸಂಬಂಧಿಸಿದ್ದಾಗಿದೆ. 1984ರ ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್‌ ಜೈಲಿನಲ್ಲಿದ್ದಾರೆ.

Kannada Bar & Bench
kannada.barandbench.com