ವಕೀಲರ ರಕ್ಷಣಾ ಕಾಯಿದೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ವಕೀಲರ ಬೃಹತ್‌ ಮೆರವಣಿಗೆ; ಗೃಹ ಸಚಿವರಿಗೆ ಮನವಿ ಸಲ್ಲಿಕೆ

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ವಕೀಲರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಿಂದ ಸ್ವಾತಂತ್ರ್ಯ ಉದ್ಯಾನದ ಮೂಲಕ ಮೌರ್ಯ ವೃತ್ತದವರೆಗೆ ರ್‍ಯಾಲಿ ನಡೆಸಿದರು.
ವಕೀಲರ ರಕ್ಷಣಾ ಕಾಯಿದೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ವಕೀಲರ ಬೃಹತ್‌ ಮೆರವಣಿಗೆ; ಗೃಹ ಸಚಿವರಿಗೆ ಮನವಿ ಸಲ್ಲಿಕೆ
Published on

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಶುಕ್ರವಾರ ವಕೀಲರ ಸಮೂಹ ಬೆಂಗಳೂರಿನಲ್ಲಿ ಬೃಹತ್‌ ಮೆರವಣಿಗೆ ನಡೆಸಿತು.

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ವಕೀಲರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಿಂದ ಸ್ವಾತಂತ್ರ್ಯ ಉದ್ಯಾನದ ಮೂಲಕ ಮೌರ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ‘‘ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡಿಸಿ ವಕೀಲರ ರಕ್ಷಣಾ ಕಾಯಿದೆ ಜಾರಿಗೆ ಸರ್ಕಾರ ಮುಂದಾಗಬೇಕು’’ ಎಂದು ಆಗ್ರಹಿಸಿದರು.

ಈ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ವಕೀಲರ ಪರಿಷತ್ ಮುಂದಾಳ್ವತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಸೂದೆ ಜಾರಿಯಾಗುವ ವಿಶ್ವಾಸವಿದೆ” ಎಂದರು.

ಅಂತಿಮವಾಗಿ ಮೌರ್ಯ ವೃತ್ತದಲ್ಲಿ ವಕೀಲರ ಸಮೂಹವನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಟಿ ಜಿ ರವಿ, ಖಜಾಂಚಿ ಎಂ ಟಿ ಹರೀಶ್ ಸೇರಿ ಹಲವು ವಕೀಲರು ರ್‍ಯಾಲಿಯಲ್ಲಿ ಭಾಗವಹಿಸಿದ್ದರು.

Kannada Bar & Bench
kannada.barandbench.com