ವಕೀಲೆ ಚೈತ್ರಾ ಗೌಡ ಸಾವು: ತನಿಖೆಗೆ ಬೆಂಗಳೂರು ವಕೀಲರ ಸಂಘ ಆಗ್ರಹ

ಚೈತ್ರಾ ಗೌಡ ಸದೃಢ ಮನಸ್ಥಿತಿ ಹೊಂದಿದವರಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಮಹಿಳೆ ಆಗಿರಲಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
Vakeelara Bhavana, AAB
Vakeelara Bhavana, AAB

"ಹೈಕೋರ್ಟ್ ವಕೀಲೆ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಚೈತ್ರಾ ಗೌಡ ಸಾವಿನ ಪ್ರಕರಣದ ತನಿಖೆಗೆ ಎಲ್ಲ ರೀತಿಯ ಕ್ರಮ ಕೈಗೊಂಡು ಸೂಕ್ತ ನ್ಯಾಯ ಒದಗಿಸಬೇಕು" ಎಂದು ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ.

ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ ಜಿ ರವಿ ಹಾಗೂ ಖಜಾಂಚಿ ಎಂ ಟಿ ಹರೀಶ್, "ಈ ಸಾವು ಇಡೀ ವಕೀಲ ವೃಂದಕ್ಕೆ ಆಘಾತ ಉಂಟುಮಾಡಿದೆ” ಎಂದು ಹೇಳಿದ್ದಾರೆ.

"ಆಕೆಯ ಸ್ನೇಹಿತೆಯರಿಂದ ನಮಗೆ ತಿಳಿದು ಬಂದಿರುವಂತೆ ಚೈತ್ರಾ ಗೌಡ ಸದೃಢ ಮನಸ್ಥಿತಿ ಹೊಂದಿದವರಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಮಹಿಳೆ ಆಗಿರಲಿಲ್ಲ" ಎಂದು ಪತ್ರದಲ್ಲಿ ವಿವರಿಸಲಾಗಿದೆ.

"ಈ ಸಾವಿನ ಬಗ್ಗೆ ಕೂಡಲೇ ತನಿಖೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು" ಎಂದು ಮನವಿ ಮಾಡಲಾಗಿದೆ.

Related Stories

No stories found.
Kannada Bar & Bench
kannada.barandbench.com