ನಿರ್ಮಾಪಕರಾದ ಕುಮಾರ್‌, ಸುರೇಶ್‌ ವಿರುದ್ಧ ಕ್ರಿಮಿನಲ್‌ ಮಾನಹಾನಿ ದಾವೆ ದಾಖಲಿಸಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ

ಆರೋಪಿ ನಿರ್ಮಾಪಕರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶಿಸಿದ್ದು, ಸಮನ್ಸ್‌ ಜಾರಿಗೊಳಿಸಿದೆ. ವಿಚಾರಣೆಯನ್ನು ಆಗಸ್ಟ್‌ 26ಕ್ಕೆ ಮುಂದೂಡಿದೆ.
Actor Sudeep
Actor SudeepFacebook

ಚಿತ್ರ ನಟ ಸುದೀಪ್‌ ಅವರ ಖಾಸಗಿ ದೂರು ಪರಿಗಣಿಸಿ, ನಿರ್ಮಾಪಕರಾದ ಎಂ ಎನ್‌ ಕುಮಾರ್‌ ಮತ್ತು ಎಂ ಎನ್‌ ಸುರೇಶ್‌ ವಿರುದ್ಧ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಸುದೀಪ್‌ ಅವರ ಖಾಸಗಿ ದೂರಿಗೆ ಸಂಬಂಧಿಸಿದಂತೆ ಗುರುವಾರ ಅವರ ಸ್ವಯಂ ಹೇಳಿಕೆ ದಾಖಲಿಸಿಕೊಂಡು, ಕಾಯ್ದಿರಿಸಿದ್ದ ಆದೇಶವನ್ನು 13ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವೆಂಕಣ್ಣ ಬಸಪ್ಪ ಹೊಸಮನಿ ಅವರು ಇಂದು ಪ್ರಕಟಿಸಿದರು.

Also Read
ನಿರ್ಮಾಪಕರ ವಿರುದ್ಧದ ಖಾಸಗಿ ದೂರು: ಸ್ವಯಂ ಹೇಳಿಕೆ ದಾಖಲಿಸಿದ ನಟ ಸುದೀಪ್;‌ ನಾಳೆಗೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಆರೋಪಿ ನಿರ್ಮಾಪಕರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶಿಸಿದ್ದು, ಸಮನ್ಸ್‌ ಜಾರಿಗೊಳಿಸಿದೆ. ವಿಚಾರಣೆಯನ್ನು ಆಗಸ್ಟ್‌ 26ಕ್ಕೆ ಮುಂದೂಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಆರೋಪಗಳನ್ನು ಮಾಡಿರುವ ನಿರ್ಮಾಪಕರಾದ ಎಂ ಎನ್‌ ಕುಮಾರ್‌ ಮತ್ತು ಎಂ ಎನ್‌ ಸುರೇಶ್‌ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಸುದೀಪ್‌ ಖಾಸಗಿ ದೂರಿನಲ್ಲಿ ಕೋರಿದ್ದರು.

Kannada Bar & Bench
kannada.barandbench.com