ರಾಜ್ಯ ಸರ್ಕಾರದ ಹೆಚ್ಚುವರಿ ವಕೀಲ ವಿ ಶ್ರೀನಿಧಿ ಅವರು ಹೃದಯಾಘಾತದಿಂದ ನಿಧನ

ರಾಜ್ಯ ಸರ್ಕಾರದ ಹೆಚ್ಚುವರಿ ವಕೀಲ ವಿ ಶ್ರೀನಿಧಿ ಅವರು ಹೃದಯಾಘಾತದಿಂದ ನಿಧನ

ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ವಕೀಲರಾಗಿದ್ದ ವಿ ಶ್ರೀನಿಧಿ ಅವರು ಮಂಗಳವಾರ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ ಅಪೊಲೊ ಆಸ್ಪತ್ರೆಯಲ್ಲಿ ಮಧ್ಯಾಹ್ನ 2.25ಕ್ಕೆ ಹೃದಯಾಘಾತದಿಂದ ಅವರು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು.

ಶ್ರೀನಿಧಿ ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಕಳೆದ ಎಂಟು ವರ್ಷಗಳಿಂದ ರಾಜ್ಯ ಸರ್ಕಾರದ ಪರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.

ಒತ್ತುವರಿ ತೆರವು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಶ್ರೀನಿಧಿ ಅವರು ಬಿಬಿಎಂಪಿ ವಕೀಲರಾಗಿ ಅನೇಕ ಬಾರಿ ಕಠಿಣ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.

Related Stories

No stories found.
Kannada Bar & Bench
kannada.barandbench.com