ಏರೋ ಇಂಡಿಯಾ ಶೋ: ತಾತ್ಕಾಲಿಕ ಹೋರ್ಡಿಂಗ್‌ ಅಳವಡಿಕೆಗೆ ಎಚ್‌ಎಎಲ್‌ಗೆ ಅನುಮತಿಸಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕ ಅಳವಡಿಕೆ ತಡೆಯುವ ವಿಚಾರದಲ್ಲಿ ಹೈಕೋರ್ಟ್ ಈ ಹಿಂದೆ ನೀಡಿರುವ ನಿರ್ದೇಶನಗಳನ್ನು ಜಾರಿಗೆ ತರುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಪೀಠ ನಿರ್ದೇಶಿಸಿದೆ.
Aero India show and Karnataka HC
Aero India show and Karnataka HC

ಬೆಂಗಳೂರಿನ ಯಲಹಂಕ ಐಎಎಫ್ ವಾಯು ನೆಲೆಯಲ್ಲಿ ಫೆಬ್ರವರಿ 13ರಿಂದ ಐದು ದಿನಗಳ ಕಾಲ ನಡೆಯಲಿರುವ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನದ ನಿಮಿತ್ತ ನಗರದ ಹಲವೆಡೆ ತಾತ್ಕಾಲಿಕ ಹೋರ್ಡಿಂಗ್‌ಗಳನ್ನು ಅಳವಡಿಸಲು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ (ಎಚ್‌ಎಎಲ್) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅನುಮತಿ ನೀಡಬಹುದು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.

ಬಿಬಿಎಂಪಿ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕ ಅಳವಡಿಕೆ ತಡೆಯುವ ವಿಚಾರದಲ್ಲಿ ಹೈಕೋರ್ಟ್ ಈ ಹಿಂದೆ ನೀಡಿರುವ ನಿರ್ದೇಶನಗಳನ್ನು ಜಾರಿಗೆ ತರುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರವಾದ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಪೀಠವು ಇದೇ ವೇಳೆ ನಿರ್ದೇಶಿಸಿದೆ.

ಬಿಬಿಎಂಪಿ ಪರ ವಕೀಲ ಎಚ್ ಕೆ ರಮೇಶ್ ಅವರು “ಬೆಂಗಳೂರಿನ ಯಲಹಂಕ ಐಎಎಫ್ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೆ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ. ಭಾರತದ ವಿವಿಧ ರಾಜ್ಯ ಮತ್ತು ಜಗತ್ತಿನ ಹಲವು ರಾಷ್ಟ್ರಗಳಿಂದ ಜನ ಬೆಂಗಳೂರು ನಗರಕ್ಕೆ ಪ್ರದರ್ಶನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ, ಅವರಿಗೆ ಸೂಕ್ತ ಮಾಹಿತಿ ಹಾಗೂ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಹೋರ್ಡಿಂಗ್, ಸೂಚನಾ ಫಲಕ ಮತ್ತು ಮಾರ್ಗ ನಕ್ಷೆ ಅಳವಡಿಸಲು ಅನುಮತಿ ನೀಡುವಂತೆ ಬಿಬಿಎಂಪಿಗೆ ಎಚ್‌ಎಎಲ್ ಮನವಿ ನೀಡಿದೆ. ಏರ್ ಶೋ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸುವುದಾಗಿಯೂ ತಿಳಿಸಿದೆ” ಎಂದು ವಿವರಿಸಿದರು.

ಇದನ್ನು ಪರಿಗಣಿಸಿದ ಪೀಠವು ಏರೋ ಇಂಡಿಯಾ-2023ಕ್ಕೆ ಸಂಬಂಧಿಸಿದ ಜಾಹೀರಾತು ಫಲಕ ಪ್ರದರ್ಶಿಸಲು ಎಚ್‌ಎಲ್‌ಗೆ ಅನುಮತಿ ನೀಡಲು ಬಿಬಿಎಂಪಿಗೆ ಅವಕಾಶ ಕಲ್ಪಿಸಿತು.

Related Stories

No stories found.
Kannada Bar & Bench
kannada.barandbench.com