ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಮಿಶ್ರಾ ₹ 1 ಲಕ್ಷ ಮೊತ್ತದ ಬಾಂಡ್ ಸಲ್ಲಿಸಿದ ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿತು.
Air India
Air India

ಕಳೆದ ನವೆಂಬರ್‌ನಲ್ಲಿ ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಶಂಕರ್‌ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಸೋಮವಾರದಂದು ತೀರ್ಪು ಕಾಯ್ದಿರಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್‌ಜ್ಯೋತ್‌ ಸಿಂಗ್ ಭಲ್ಲಾ ಇಂದು ಆದೇಶ ಪ್ರಕಟಿಸಿದರು.

Also Read
ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಅಸಹ್ಯಕರ ಕೃತ್ಯವಾದರೂ ಕಾನೂನು ಪ್ರಕಾರ ನಡೆಯುವುದಾಗಿ ಹೇಳಿದ ದೆಹಲಿ ನ್ಯಾಯಾಲಯ

ಮಿಶ್ರಾ ₹ 1 ಲಕ್ಷ ಮೊತ್ತದ ಬಾಂಡ್ ಸಲ್ಲಿಸಿದ ಬಳಿಕ ಆತನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿತು.

ದೆಹಲಿ ಪೊಲೀಸರು ಜನವರಿ 7 ರಂದು ಬೆಂಗಳೂರಿನಲ್ಲಿ ಮಿಶ್ರಾನನ್ನು ಬಂಧಿಸಿದ್ದರು.

Related Stories

No stories found.
Kannada Bar & Bench
kannada.barandbench.com