ದೇಶದ್ರೋಹ: ಅಲಿಗಢದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜೀಲ್ ಇಮಾಮ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

ಅಲಿಗಢದಲ್ಲಿ ಶಾರ್ಜಿಲ್ ಇಮಾಮ್ ವಿರುದ್ಧ ದಾಖಲಾದ ದೇಶದ್ರೋಹ ಪ್ರಕರಣದಲ್ಲಿ ಅಲಾಹಾಬಾದ್ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ದೇಶದ್ರೋಹ: ಅಲಿಗಢದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜೀಲ್ ಇಮಾಮ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು
Published on

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಜನವರಿ 16, 2020ರಂದು ನಡೆದಿದ್ದ ಪ್ರತಿಭಟನೆ ವೇಳೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಶಾರ್ಜಿಲ್‌ ಇಮಾಮ್‌ ಅವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಅಲಾಹಾಬಾದ್‌ ಹೈಕೋರ್ಟ್‌ ಶನಿವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೌಮಿತ್ರ ದಯಾಳ್ ಸಿಂಗ್ ಜಾಮೀನು ಮಂಜೂರು ಮಾಡಿದ್ದಾರೆ. ಹೈಕೋರ್ಟ್‌ ನೀಡಿದ ಆದೇಶದ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Also Read
[ಸಿಎಎ ವಿರೋಧಿ ಭಾಷಣ] ರಾಷ್ಟ್ರದ್ರೋಹ ಪ್ರಕರಣದಲ್ಲಿ ಶಾರ್ಜೀಲ್‌ ಇಮಾಮ್‌ಗೆ ಜಾಮೀನು ತಿರಸ್ಕರಿಸಿದ ದೆಹಲಿ ನ್ಯಾಯಾಲಯ

ಸಿಎಎ ವಿರೋಧಿ ಪ್ರತಿಭಟನೆ ವೇಳೆ 2019ರಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಇಮಾಮ್ ವಿರುದ್ಧ ದಾಖಲಾದ ದೇಶದ್ರೋಹ ಪ್ರಕರಣದಲ್ಲಿ ಕಳೆದ ತಿಂಗಳು ದೆಹಲಿ ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿತ್ತು.

ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಇಮಾಮ್ ಅವರು ಮಾಡಿದ ಭಾಷಣವು ಸ್ಪಷ್ಟವಾಗಿ ಕೋಮು/ವಿಭಜಕ ಮಾರ್ಗಗಳಲ್ಲಿದೆ ಮತ್ತು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಮೇಲೆ ಪರಿಣಾಮ ಬೀರಬಹುದು ಎಂದು ಜಾಮೀನು ನಿರಾಕರಣೆ ವೇಳೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುಜ್ ಅಗರ್ವಾಲ್ ಅವರು ಅಭಿಪ್ರಾಯಪಟ್ಟಿದ್ದರು.

Kannada Bar & Bench
kannada.barandbench.com