ದೈನಿಕ್ ಜಾಗರಣ್ ಪ್ರಧಾನ ಸಂಪಾದಕ ಸಂಜಯ್ ಗುಪ್ತಾರಿಗೆ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ [ಚುಟುಕು]

allahabad high court and Dainik jagran

allahabad high court and Dainik jagran

ಮಾನಹಾನಿಕರ ವರದಿ ಪ್ರಕಟಿಸಿದ್ದಕ್ಕಾಗಿ ದೈನಿಕ್ ಜಾಗರಣ್ ಪತ್ರಿಕೆಯ ಮುಖ್ಯ ಸಂಪಾದಕ ಸಂಜಯ್ ಗುಪ್ತಾರಿಗೆ ವಿಚಾರಣಾ ನ್ಯಾಯಾಲಯವೊಂದು ನೀಡಿದ್ದ ಸಮನ್ಸ್‌ ಅನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಆದೇಶವು ಕಾನೂನು ನಿಬಂಧನೆಗಳನ್ನು ಉಲ್ಲಂಘಿಸಿರುವುದರಿಂದ ಸಮರ್ಥನೀಯವಲ್ಲ ಎಂದು ನ್ಯಾಯಮೂರ್ತಿ ಸೈಯದ್ ಅಫ್ತಾಬ್ ಹುಸೇನ್ ರಿಜ್ವಿ ಅವರಿದ್ದ ಪೀಠ ತೀರ್ಪು ನೀಡಿತು.

ಕೆಳ ಹಂತದ ನ್ಯಾಯಾಲಯವೊಂದು ಸಮನ್ಸ್ ಜಾರಿಗೊಳಿಸಿದ್ದು, ಗುಪ್ತಾ, ಪತ್ರಿಕೆಯ ಪ್ರಕಾಶಕರು ಹಾಗೂ ಹಿಂದಿ ಪತ್ರಿಕೆಯ ಬ್ಯೂರೋ ಮುಖ್ಯಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಗುಪ್ತಾ ಅವರು ಪ್ರಧಾನ ಸಂಪಾದಕರಾಗಿದ್ದು ಅವರನ್ನು ವಿವಿಧ ಆವೃತ್ತಿಗಳಲ್ಲಿ ಪ್ರಕಟವಾದ ಸುದ್ದಿಗೆಲ್ಲ ಹೊಣೆಗಾರರನ್ನಾಗಿಸಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.
Kannada Bar & Bench
kannada.barandbench.com