ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಅವ್ಯವಹಾರ ಆರೋಪ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಜಾಣಗೆರೆ ವೆಂಕಟರಾಮಯ್ಯ ಹಾಗೂ ವಸುಂಧರ ಭೂಪತಿ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ವಾರ್ಷಿಕ ಸರ್ವ ಸದಸ್ಯರ ಸಭೆ ರದ್ದುಪಡಿಸಲಾಗಿತ್ತು. ಎನ್ ಹನುಮೇಗೌಡ ನೀಡಿದ ದೂರಿನ ಆಧಾರದಲ್ಲಿ ಆರ್ಥಿಕ ಅವ್ಯವಹಾರ ಕುರಿತು ತನಿಖೆಗೆ ಆದೇಶಿಸಲಾಗಿತ್ತು.
Mahesh Joshi and Karnataka HC
Mahesh Joshi and Karnataka HC
Published on

ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆರ್ಥಿಕ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವ ಸಂಬಂಧ ಸಹಕಾರ ಸಂಘಗಳ ಉಪ ನಿಬಂಧಕರು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ರದ್ದುಪಡಿಸಿದ್ದ ಬೆಂಗಳೂರು ನಗರ ಜಿಲ್ಲೆಯ ಎರಡನೇ ವಲಯದ ಸಹಕಾರ ಸಂಘಗಳ ಉಪನಿಬಂಧಕರು ಪರಿಷತ್ತಿನ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಆದೇಶಗಳನ್ನು ಹೊರಡಿಸಿದ್ದರು. ಇದನ್ನು ರದ್ದುಪಡಿಸುವಂತೆ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು 

ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ವಾದಿಸಿದರು.

Also Read
ಕಸಾಪ ಅವ್ಯವಹಾರ ಆರೋಪ: ತನಿಖಾ ಪ್ರಕ್ರಿಯೆ, ದಾಖಲೆಗಳ ಮಾಹಿತಿ ಸಲ್ಲಿಕೆಗೆ ಹೈಕೋರ್ಟ್‌ ನಿರ್ದೇಶನ

ಜಾಣಗೆರೆ ವೆಂಕಟರಾಮಯ್ಯ ಹಾಗೂ ಡಾ. ವಸುಂಧರ ಭೂಪತಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ 2025ರ ಜೂನ್ 29ರಂದು ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ರದ್ದುಪಡಿಸಿ ಜೂನ್ 27ರಂದು ಸಹಕಾರ ಸಂಘಗಳ ಉಪನಿಬಂಧಕರು ಆದೇಶ ಹೊರಡಿಸಿದ್ದರು.

ಅಲ್ಲದೆ, ಎನ್ ಹನುಮೇಗೌಡ ಹಾಗೂ ಇತರರು ನೀಡಿದ ದೂರಿನ ಹಿನ್ನೆಲೆಯಲ್ಲಿ 2023-24ರಿಂದ ಇಲ್ಲಿವರೆಗೆ ಪರಿಷತ್ತು ಅನುಮೋದಿಸಿರುವ ತಿದ್ದುಪಡಿಗಳು, ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪರಿಷತ್ತಿನ ಅಧ್ಯಕ್ಷರು ನಿಯಮಬಾಹಿರವಾಗಿ ನೀಡಿರುವ ನೋಟಿಸ್‌ಗಳು, 2023-24ನೇ ಸಾಲಿನಲ್ಲಿ ಪರಿಷತ್ತಿಗೆ ಸಂಗ್ರಹವಾಗಿರುವ ಆದಾಯವನ್ನು ದುರುಪಯೋಗಪಡಿಸಿಕೊಂಡಿರುವುದು, ಈ ಅವಧಿಯಲ್ಲಿನ ಖರೀದಿ ಮತ್ತು ಮಾರಾಟದಲ್ಲಿ ಆಗಿರುವ ಅವ್ಯವಹಾರ ಮತ್ತಿತರ ವಿಷಯಗಳನ್ನು ಪರಿಶೀಲಿಸಿ ಸೂಕ್ತ ವಿಚಾರಣೆ ನಡೆಸಲು ತನಿಖಾಧಿಕಾರಿಯನ್ನು ನೇಮಕ ಮಾಡಿ ಜೂನ್ 30ರಂದು ಅದೇಶ ಹೊರಡಿಸಲಾಗಿತ್ತು. ಈ ಆದೇಶಗಳನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com