ಇ ಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ: ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ಪ್ರಕರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ ಎಂದು ಹೈಕೋರ್ಟ್‌ ಅದೇಶದಲ್ಲಿ ತಿಳಿಸಿತ್ತು. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದಿತ್ತು.
Arvind Kejriwal, Supreme Court and ED
Arvind Kejriwal, Supreme Court and ED
Published on

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ ಡಿ) ತನ್ನನ್ನು ಬಂಧಿಸಿ ಇ ಡಿ ವಶಕ್ಕೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15 (ಸೋಮವಾರ) ವಿಚಾರಣೆ ನಡೆಸಲಿದೆ  [ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ನಡುವಣ ಪ್ರಕರಣ].

ಪ್ರಕರಣವನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿರುವ ಪೀಠ ವಿಚಾರಣೆ ನಡೆಸಲಿದೆ.

ದೆಹಲಿ ಹೈಕೋರ್ಟ್ ತನ್ನ ಅರ್ಜಿ ವಜಾಗೊಳಿಸಿದ ನಂತರ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಆದೇಶದಲ್ಲಿ ತಿಳಿಸಿದ್ದರು. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಹೈಕೋರ್ಟ್ ಹೇಳಿತ್ತು.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಆಗಸ್ಟ್ 17, 2022 ರಂದು ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಇ ಡಿ ಅಕ್ರಮ ಹಣ ವರ್ಗಾವಣೆಯ ತನಿಖೆ ಕೈಗೆತ್ತಿಕೊಂಡಿತ್ತು.  ಮನಿ ಲಾಂಡರಿಂಗ್ ತನಿಖೆಯು ಉದ್ಭವಿಸಿದೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ 2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 17, 2022ರಂದು ಪ್ರಕರಣ ದಾಖಲಿಸಿಕೊಂಡಿತ್ತು. . ಈ ಹಿನ್ನೆಲೆಯಲ್ಲಿ ಇ ಡಿ ಅಕ್ರಮ ಹಣ ವರ್ಗಾವಣೆಯ ತನಿಖೆ ಕೈಗೆತ್ತಿಕೊಂಡಿತ್ತು.  ಸಿಬಿಐ ಪ್ರಕರಣ ದಾಖಲಿಸಿತ್ತು. 

ನೀತಿ ರೂಪಿಸುವ ಹಂತದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು, ಅಪರಿಚಿತ ಮತ್ತು ಅನಾಮಧೇಯ ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಹಾಗೂ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಲಾಗಿತ್ತು. ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ ಶಾಸಕಿ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಪುತ್ರಿ ಕೆ ಕವಿತಾ ಅವರನ್ನು ಕೂಡ ಇ ಡಿ ಬಂಧಿಸಿದೆ. ಈ ಮಧ್ಯೆ ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ದೊರೆತಿದ್ದು ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಎಎಪಿಯ ಏಕೈಕ ನಾಯಕ ಸಿಂಗ್‌ ಎನಿಸಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಪ್ರಸ್ತುತ ತಿಹಾರ್‌ ಜೈಲಿನಲ್ಲಿದ್ದಾರೆ.

Kannada Bar & Bench
kannada.barandbench.com