![ಆರ್ಯನ್ ಡ್ರಗ್ಸ್ ಪ್ರಕರಣ: ಆರೋಪಪಟ್ಟಿ ಸಲ್ಲಿಸಲು ಎನ್‌ಸಿಬಿಗೆ 60 ದಿನ ಹೆಚ್ಚುವರಿ ಕಾಲಾವಕಾಶ [ಚುಟುಕು]](https://gumlet.assettype.com/barandbench-kannada%2F2022-03%2Fcc64705d-7d9d-422f-98f9-5cefd95323ac%2Faryan_khan.avif?auto=format%2Ccompress&fit=max)
ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದಾರೆ ಎನ್ನಲಾದ ವಿಲಾಸಿ ಹಡಗಿನ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಆರೋಪ ಪಟ್ಟಿಯನ್ನು ಸಲ್ಲಿಸಲು ಮುಂಬೈ ನ್ಯಾಯಾಲಯ ಹೆಚ್ಚುವರಿಯಾಗಿ 60 ದಿನಗಳ ಕಾಲಾವಕಾಶ ನೀಡಿದೆ. ಪ್ರಕರಣದಲ್ಲಿ ಆರ್ಯನ್ ಖಾನ್ ಪ್ರಮುಖ ಆರೋಪಿಯಾಗಿದ್ದಾರೆ.
ಮಾದಕವಸ್ತು ಮತ್ತು ಅಮಲುಪದಾರ್ಥ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆದೇಶ ನೀಡಿದರು.
ಹೆಚ್ಚಿನ ಮಾಹಿತಿಗೆ ಬಾರ್ ಅಂಡ್ ಬೆಂಚ್ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.