ಕೆಎಸ್‌ಎಲ್‌ಎಸ್‌ಎ ಕೋರಿಕೆ: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ಶೇ. 50ರಷ್ಟು ಇಳಿಸಿದ ರಾಜ್ಯ ಸರ್ಕಾರ

ಲೋಕ ಅದಾಲತ್‌ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯು ಸಂಚಾರಿ–ಚಲನ್‌ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡುವಂತೆ ರಾಜ್ಯ ಸರ್ಕಾರವನ್ನು ಕೋರಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಇತ್ತೀಚಿನ ಸಭೆಯಲ್ಲಿ ನಿರ್ಧರಿಸಿತ್ತು.
KSLSA, Justice B Veerappa
KSLSA, Justice B Veerappa
Published on

ಸಂಚಾರ ನಿಯಮಗಳನ್ನು ಉಲ್ಲಂಘಿಸಿ ದಂಡ ಕಟ್ಟದೇ ಪ್ರಕರಣ ಬಾಕಿ ಇರುವವರು ಫೆಬ್ರವರಿ 11ರಂದು ರಾಜ್ಯಾದ್ಯಂತ ನಡೆಯಲಿರುವ ಲೋಕ ಅದಾಲತ್‌ನಲ್ಲಿ ಶೇ.50ರಷ್ಟು ಮಾತ್ರ ದಂಡದ ಮೊತ್ತ ಪಾವತಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಪೊಲೀಸ್‌ ಇಲಾಖೆಯು ಸಂಚಾರಿ–ಚಲನ್‌ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೋರಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ಜನವರಿ 27ರಂದು ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಇದನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ಆದೇಶ ಮಾಡಿದೆ.

Kannada Bar & Bench
kannada.barandbench.com