ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ: ಹೈಕೋರ್ಟ್‌ನಿಂದ ಇಂದು ತೀರ್ಪು

ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿರುವ ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿದೆ.
Karnataka high court
Karnataka high court

ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಕುರಿತ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ (ಸೆ.28, 2021) ಪ್ರಕಟಿಸಲಿದೆ.

ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾರ್ಚ್‌ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್ ತಿಂಗಳಿನಲ್ಲಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣಾ ಹಂತದಲ್ಲಿದ್ದಾಗಲೇ ಮಾರ್ಚ್‌ 19ರ ಆದೇಶ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಮುಚ್ಚಳಿಕೆ ಆಧರಿಸಿ, ದತ್ತ ಪೀಠದ ಪೂಜಾ ವಿಧಿ ವಿಧಾನದ ಬಗ್ಗೆ ಯಾವುದೇ ಆತುರದ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್, ಅದನ್ನು ಕಾಲ ಕಾಲಕ್ಕೆ ವಿಸ್ತರಿಸಿಕೊಂಡು ಬಂದಿತ್ತು.

Also Read
ಕೊರೊನಿಲ್ ಬಗ್ಗೆ ಸುಳ್ಳು ಮಾಹಿತಿ ಹರಡದಂತೆ ಬಾಬಾ ರಾಮದೇವ್‌ಗೆ ಸೂಚಿಸಲು ದೆಹಲಿ ಹೈಕೋರ್ಟ್‌ಗೆ ವೈದ್ಯಕೀಯ ಸಂಘ ಮನವಿ

ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು.

ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಆ ವರದಿ ಆಧರಿಸಿ ರಾಜ್ಯ ಸರ್ಕಾರ ಮುಜಾವರ್ ನೇಮಕ ಮಾಡಿದೆ. ಹಿಂದೂಗಳ ಪೂಜಾಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್‌ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

Related Stories

No stories found.
Kannada Bar & Bench
kannada.barandbench.com