ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಮಾಗಡಿ ನ್ಯಾಯಾಲಯ

ಮೃತ್ಯುಂಜಯ ಸ್ವಾಮೀಜಿ ಹಾಗೂ ವಕೀಲ ಮಹದೇವಯ್ಯ ಅವರನ್ನು ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಗೂ ನೀಲಾಂಬಿಕೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಮಾಗಡಿ ನ್ಯಾಯಾಲಯ

ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಾಗಿರುವ ಮೂವರು ಆರೋಪಿಗಳನ್ನು ನವೆಂಬರ್‌ 15ರವರೆಗೆ ಮಾಗಡಿ ನ್ಯಾಯಾಲಯವು ಶನಿವಾರ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಪೊಲೀಸ್‌ ಕಸ್ಟಡಿ ಇಂದು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ ಧನಲಕ್ಷ್ಮಿ ಅವರ ಮುಂದೆ ಹಾಜರುಪಡಿಸಿದರು. ಇದನ್ನು ಪರಿಗಣಿಸಿದ ಪೀಠವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

Also Read
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ನ. 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಮಾಗಡಿ ನ್ಯಾಯಾಲಯ

ಮೃತ್ಯುಂಜಯ ಸ್ವಾಮೀಜಿ ಹಾಗೂ ವಕೀಲ ಮಹದೇವಯ್ಯ ಅವರನ್ನು ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಗೂ ನೀಲಾಂಬಿಕೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com