ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ವಾಮಿ ಅವರ ಪ್ರಕರಣ ಆಲಿಸುತ್ತಿರುವ ಬಾಂಬೆ ಹೈಕೋರ್ಟ್‌ಗೆ ಅವರು ನಿಧನರಾದ ಸುದ್ದಿಯನ್ನು ಸ್ವಾಮಿ ಅವರು ಚಿಕಿತ್ಸೆಗೆ ಒಳಗಾಗಿದ್ದ ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದರು.
ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ ಮಧ್ಯಾಹ್ನ 1.30 ಕ್ಕೆ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು.

ಕೋವಿಡ್‌ ದೃಢಪಟಿರುವುದು ಪತ್ತೆಯಾದ ನಂತರ ಸ್ವಾಮಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಭಾನುವಾರ ಮುಂಜಾನೆ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದ ಬಳಿಕ ಸ್ವಾಮಿ ಅವರು ಜಾಮೀನಿಗಾಗಿ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Also Read
ಜೈಲಿನಲ್ಲೇ ಸಾಯುವೆ, ಆಸ್ಪತ್ರೆಗೆ ದಾಖಲಾಗುವುದಿಲ್ಲ: ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್‌ಗೆ ಸ್ಟ್ಯಾನ್‌ ಸ್ವಾಮಿ ಹೇಳಿಕೆ
Also Read
ಎಲ್ಗಾರ್‌ ಪರಿಷತ್‌ ಪ್ರಕರಣ: ಫಾದರ್ ಸ್ಟ್ಯಾನ್‌ ಸ್ವಾಮಿಯವರ ಜಾಮೀನು ಮನವಿ ತಿರಸ್ಕರಿಸಿದ ಮುಂಬೈ ವಿಶೇಷ ನ್ಯಾಯಾಲಯ

ವಿಶೇಷ ಎನ್ಐಎ ನ್ಯಾಯಾಲಯ ಇದನ್ನು ನಿರಾಕರಿಸಿದ ನಂತರ ಸ್ವಾಮಿ ಜಾಮೀನುಗಾಗಿ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಬೇಕೆಂದು ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಈ ಹಿಂದೆ ಹೈಕೋರ್ಟ್‌ ಆದೇಶಿಸಿತ್ತು. ಆದರೆ ಆಸ್ಪತ್ರೆಗೆ ದಾಖಲಾಗಲು ಸ್ಪಷ್ಟವಾಗಿ ನಿರಾಕರಿಸಿದ್ದ ಅವರು ತಮ್ಮನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದರು.

ಬಳಿಕ ಆಸ್ಪತ್ರೆಗೆ ದಾಖಲಾಗಲು ಒಪ್ಪಿಗೆ ನೀಡಿದ ನಂತರ ಎಂಬತ್ತು ವರ್ಷದ ಪಾದ್ರಿ ಸ್ಟ್ಯಾನ್‌ ಸ್ವಾಮಿ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಗಮನಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ನ್ಯಾಯಾಲಯ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

Related Stories

No stories found.
Kannada Bar & Bench
kannada.barandbench.com